ಬೀದರ್:ಮಾ.23: ತಾಲ್ಲೂಕಿನ ನಾಗೋರಾ ಪಿಡಿಒ ಗಾಯತ್ರಿದೇವಿ ಎನ್. ಹೊಸಮನಿ ಅವರಿಗೆ ಗ್ರಾಮೀಣಾಭಿವೃದ್ಧಿ ಸೇವೆಗಾಗಿ ಬೆಂಗಳೂರಿನ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಕೊಡಲಾಗುವ ವಿಶ್ವೇಶ್ವರಯ್ಯ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ ದೊರೆತಿದೆ.
ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಖಿಲ ಭಾರತ ಮಕ್ಕಳ ಸಾಹಿತ್ಯ ಹಾಗೂ ಸಾಂಸ್ಕøತಿಕ ಸಮ್ಮೇಳನದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಗಾಯತ್ರಿದೇವಿ ಅವರು ಪಂಚಾಯಿತಿ ವ್ಯಾಪ್ತಿಯ ಶಾಲೆಗಳಲ್ಲಿ ಉದ್ಯಾನ, ಕೈತೋಟ, ಸ್ವಚ್ಛ ಸಂಕಿರಣ ನಿರ್ಮಾಣ ಮೂಲಕ ಗಮನ ಸೆಳೆದಿದ್ದಾರೆ.