ಪಿಡಿಒ ಲೋಕಾಯುಕ್ತ ಬಲೆಗೆ

ವಿಜಯಪುರ,ಜ.10:ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹುಣಶ್ಯಾಳ ಪಿಬಿ ಗ್ರಾಮ ಪಂಚಾಯತಿ ಪಿಡಿಒ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.
ಸಂಗಮೇಶ ಕುಂಬಾರ ಲಂಚ ಸ್ವೀಕರಿಸುವ ಸಮಯದಲ್ಲಿ ಲೋಕಾಯುಕ್ತ ಪೆÇಲೀಸರಿಗೆ ಸಿಕ್ಕಿ ಬಿದ್ದ ಪಿಡಿಒ.
ಪಿಡಿಒ ಕುಂಬಾರ 2 ಗುಂಟೆ ಖುಲ್ಲಾ ಜಾಗೆಯ ಉತಾರ ಮಾಡಿಕೊಡಲು 20 ಸಾವಿರ ಲಂಚದ ಬೇಡಿಕೆ ಇಟ್ಟಿದ್ದ. ಮಹಾದೇವಿ, ವಿಜಯಲಕ್ಷ್ಮಿ ಹೆಸರಿನಲ್ಲಿ ಉತಾರೆ ಮಾಡಬೇಕಿತ್ತು. ಅವರಿಂದ 20 ಸಾವಿರ ಪೈಕಿ 15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಸೆರೆ ಹಿಡಿದಿದ್ದಾರೆ.
ವಿಜಯಪುರ ಲೋಕಾಯುಕ್ತ ಪೆÇಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.