ಪಿಡಿಒ ವರ್ಗಾವಣೆ ರದ್ಧತಿಗೆ ಡಿಎಸ್‌ಎಸ್ ಒತ್ತಾಯ

ರಾಯಚೂರು, ನ.೧೫-ತಾಲೂಕಿನ ಕಲ್ಮಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧರ್ಶನ್ ವರ್ಗಾವಣೆ ರದ್ದು ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ತಾಲೂಕಿನ ಕಲ್ಮಲಾ ಗ್ರಾಮ ಪಂಚಾಯತಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುಧರ್ಶನ್ ಎನ್ ಅವರನ್ನು ಏಕಾಏಕಿ ಬೇರೆ ಸ್ಥಳಕ್ಕೆ ವರ್ಗಾವಣೆ ಮಾಡಿರುವುದು ಖಂಡನೀಯ ಎಂದು ಆಕ್ರೋಶ ಹೊರಹಾಕಿದರು. ಸುಮಾರು ೩ ವರ್ಷಗಳಿಂದ ಕಲ್ಮಲಾ ಗ್ರಾಮ ಪಂಚಾಯತಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮದ ಹಲವಾರು ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುತ್ತಾ ಸಾರ್ವಜನಿಕರಿಗೆ ಸಹಕರಿಸುತ್ತಿದ್ದರು. ಗ್ರಾಮದ ಕುಡಿಯುವ ನೀರಿನ ಸಮಸ್ಯೆ ರಸ್ತೆ, ಶೌಚಾಲಯ, ವಸ ಉದ್ಯೋಗ ಖಾತ್ರಿ ಕೆಲಸಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತ ಬಂದಿರುತ್ತಾರೆ. ಆದರೆ ಗ್ರಾಮ ಪಂಚಾಯತ ಅಧ್ಯಕ್ಷರು ಹಾಗೂ ಕೆಲವು ಪಂಚಾಯತ ಕೈಗೊಂಬೆಯಂತೆ ನಡೆದುಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ಅವರನ್ನು ಬೇರೆ ಕಡೆ ವರ್ಗಾವಣೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಭಿವೃದ್ಧಿ ಪೂರಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪದಡಿ ಸುಧರ್ಶನ್ ಅವರನ್ನು ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದರು. ಅಧಿಕಾರಿಗಳ ಮೇಲೆ ಒತ್ತಡ ಹೇರಿರುವುದನ್ನು ಕೂಡಲೇ ಹಿಂಪಡೆದು ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕು.
ಒಂದು ವೇಳೆ ನಮ್ಮ ಮನವಿಯನ್ನು ಗಂಭೀರವಾಗಿ ಪರಿಗಣಿಸದೆ ಇದ್ದಲ್ಲಿ ಅಧಿಕಾರಿಗಳ ಕಚೇರಿ ಮುಂದೆ ಅನಿರ್ಧಿಷ್ಟ ಧರಣಿ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ವಿಜಯ ಕುಮಾರ ಆಲ್ಕೂರು, ರಾಜು ಬೊಮ್ಮನಾಳ, ಬಸವರಾಜ ನಾಡಂಗಿ ಹಾಗೂ ಧರ್ಮಲಿಂಗ ಸೇರಿದಂತೆ ಉಪಸ್ಥಿತರಿದ್ದರು.