ಪಿಯು ಪರೀಕ್ಷೆಗೆ ಸಿದ್ಧತೆ

ವಿಜಯಪುರ, ಮಾ ೯- ಮಾ.೯ ರಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾಗೂ ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ೩೬೦ ಮಂದಿ, ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ೪೩೬ ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮಗಳನ್ನು ತಡೆಗಟ್ಟಲು ಸಿ.ಸಿ.ಕ್ಯಾಮಾರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆಯನ್ನು ಜಾರಿಗೊಳಿಸಿದ್ದಾರೆ. ಸಮೀಪದ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದಾರೆ.ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಮೂಲಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಪ್ರತಿಯೊಂದು ಕೊಠಡಿಗೂ ಕಲ್ಪಿಸಲಾಗಿದೆ. ಶೌಚಾಯಲಯಗಳ ವ್ಯವಸ್ಥೆ, ಮಾಡಲಾಗಿದೆ ಎಂದು ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಗ್ರೇಸಿ ವಿನುತ ತಿಳಿಸಿದ್ದಾರೆ.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾಗಿ ಪ್ರಾಂಶುಪಾಲರಾದ ಟಿ.ಗೋಪಾಲಯ್ಯ ಕಾರ್ಯನಿರ್ವಹಿಸಲಿರುವರು.