ಪಿಯು ಪ್ರಥಮ ವಿದ್ಯಾರ್ಥಿಗಳನ್ನು ಸ್ವಾಗತಿಸಿಕೊಂಡ ಹಿರಿಯ ವಿದ್ಯಾರ್ಥಿಗಳು

ಚಿಂಚೋಳಿ,ಮಾ.15- ಪಟ್ಟಣದ ಚಂದಾಪುರದಲ್ಲಿರುವ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪ್ರಥಮ ಪಿ.ಯು.ಸಿ. ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮಕ್ಕೆ ಡಾ. ಸಿ.ವಿ.ಕಲಬುರ್ಗಿ ಚಾಲನೆ ನೀಡಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದಂತೆ ತಮ್ಮ ಆರೋಗ್ಯ ಹಾಗೂ ಶೈಕ್ಷಣಿಕ ಸಾಧನೆಯ ಮೂಲಕ ಒಳ್ಳೆಯ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿದ್ಯಾರ್ಥಿಗಳು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳಾಗಲು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪರೀಕ್ಷೆಗಳನ್ನು ಎದುರಿಸಲು ಯಾವುದೇ ಕಾರಣಕ್ಕು ಸಮಯವನ್ನು ವ್ಯರ್ಥಗಾಗದಂತೆ ಎಚ್ಚರ ವಹಿಸಬೇಕು, ಈ ಮೂಲಕ ಚಿಂಚೋಳಿ ಮತ್ತು ರಾಜ್ಯದ ಹೆಸರನ್ನು ರಾಷ್ಟ್ರದಲ್ಲಿ ಮಿಂಚುವಂತೆ ಮಾಡಬೇಕು ಎಂದು ಕರೆ ನೀಡಿದರು.
ಕರ್ಯಕ್ರಮದಲ್ಲಿ ಪೆÇ್ರ.ಜಿ.ಜಿ. ಗೌಡಪ್ಪಗೌಡ. ಪಿಯು ಕಾಲೇಜಿನ ಉಪನ್ಯಾಸಕರಾದ ಸುನೀಲ ಸಲಗರ. ಮತ್ತು ಪಿಯು ಕಾಲೇಜಿನ ಉಪನ್ಯಾಸಕರು ಹಾಗೂ ಪಿಯು ಪ್ರಥಮ ವರ್ಷದ ಮತ್ತು ಪಿಯು ದ್ವಿತೀಯ ವರ್ಷದ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.