ಪಿ.ಎಂ. ಕಾರ್ಯಕ್ರಮ: ಬಸ್ ಸಂಚಾರದಲ್ಲಿ ವ್ಯತ್ಯಯ

ಕಲಬುರಗಿ,ಜ.18:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19 ರಂದು ಸೇಡಂ ತಾಲೂಕಿನ ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಹಾಗೂ ಸರ್ಕಾರದ ವಿವಿಧ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ (ಜಿಲ್ಲಾಡಳಿತದ ಆದೇಶದ ಮೇರೆಗೆ) ಫಲಾನುಭವಿಗಳನ್ನು ಕರೆತರಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಘಟಕಗಳಿಂದ 2,500 ವಾಹನಗಳನ್ನು ಮಳಖೇಡಗೆ ಕರಾರು ಒಪ್ಪಂದದ ಮೇಲೆ ಒದಗಿಸಲಾಗುತ್ತಿದೆ.

ಇದೇ ಜನವರಿ 19 ರಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯಾಪ್ತಿಯಲ್ಲಿನ ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಇದಕ್ಕೆ ಸಹಕರಿಸಬೇಕೆಂದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.