ಪಿ.ಎಂ. ಕಾರ್ಯಕ್ರಮ ಹಿನ್ನೆಲೆ:ಗ್ರಾಮೀಣ ಹಾಗೂ ನಗರ ಬಸ್‍ಗಳ ಸಂಚಾರದಲ್ಲಿ ವ್ಯತ್ಯಯ

ಕಲಬುರಗಿ,ಜ.17:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19 ರಂದು ಸೇಡಂ ತಾಲ್ಲೂಕಿನ ಮಳಖೇಡದಲ್ಲಿ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಿಗಮದ ವಿಭಾಗ-1ರಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಸ್‍ಗಳನ್ನು ಕರಾರು ಒಪ್ಪಂದದ ಮೇಲೆ ನೀಡಲಾಗುತ್ತಿದೆ.

ಆದ್ದರಿಂದ ಜನವರಿ 18ರ ಸಂಜೆಯಿಂದ 19ರ ಸಂಜೆಯವರೆಗೆÉ ವೇಗದೂತ, ಗ್ರಾಮೀಣ ಮತ್ತು ನಗರ ಸಾರಿಗೆ ಸಂಚಾರದಲ್ಲಿ ಅಡಚಣೆ ಉಂಟಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಇದಕ್ಕೆ ಸಹಕರಿಸಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.