ಪಿ.ಎಮ್. ಕಿಸಾನ್ ಯೋಜನೆ:ಇ-ಕೆವೈಸಿ ಮಾಡಿಕೊಳ್ಳಲು ರೈತರಿಗೆ ಜು. 31 ರವರೆಗೆ ಗಡುವು

ಕಲಬುರಗಿ,ಜು.26:ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿ.ಎಮ್. ಕಿಸಾನ್ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಲು 2022ರ ಜುಲೈ 31 ರವರೆಗೆ ಗಡುವು ನಿಗದಿಪಡಿಸಲಾಗಿದೆ. ಈ ಸೂಚನೆ ಪಾಲಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೂಳ್ಳಲಿದೆ ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

    ನೈಜ ಫಲಾನುಭವಿಗಳನ್ನು ಆಯ್ಕೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಹೊಸ ಆದೇಶ ಹೊರಡಿಸಿದೆ. ಇ-ಕೆವೈಸಿ ಮಾಡಿಕೊಂಡಲ್ಲಿ ಅರ್ಹ ರೈತರ ಖಚಿತ ಮಾಹಿತಿ ಲಭ್ಯವಾಗಲಿದೆ. ಇದಕ್ಕಾಗಿ ಆಧಾರ್ ಕಾರ್ಡ್ ಸಂಖ್ಯೆ ಲಿಂಕ್ ಮಾಡಬೇಕಿದೆ. ಒಂದೇ ಕುಟುಂಬದ ಹಲವರ ಹೆಸರಿನಲ್ಲಿ ಆರ್.ಟಿ.ಸಿ ಇದ್ದ ಕಾರಣ ಎರಡು ಅಥವಾ ಮೂರು ಜನರು ಯೋಜನೆಗೆ ನೋಂದಣಿ ಮಾಡಿಕೂಂಡಿದ್ದರು. ಆದರೆ ಈ ಬಾರಿ ಆಧಾರ ಲಿಂಕ್ ಮಾಡುವುದರಿಂದ ಕುಟುಂಬದ ಮಾಹಿತಿ ಲಭ್ಯವಾಗುವುದರಿಂದ ಎಷ್ಟೇ ಜನರ ಹೆಸರಿನಲ್ಲಿ ಆರ್.ಟಿ.ಸಿ. ಗಳಿದ್ದರೂ ಒಬ್ಬರಿಗೆ ಅμÉ್ಟ ನೆರವು ಸಿಗಲಿದೆ. ಆದಾಯ ತೆರಿಗೆ (Iಓಅಔಒಇ ಖಿಂಘಿ) ಕಟ್ಟುವವರ ಮಾಹಿತಿಯೂ ಸಹ ಲಭ್ಯವಾಗಲಿದೆ.
  ರೈತರು ನಾಗರಿಕ ಸೇವಾ ಕೇಂದ್ರ (ಸಿ.ಎನ್.ಸಿ.) ದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು 2022ರ ಜುಲೈ 31 ರೊಳಗಾಗಿ ಮಾಡಿಸಬೇಕು. ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ “ಗ್ರಾಮ ಒನ್” ಸೇವಾ ಕೇಂದ್ರಗಳಲ್ಲಿಯೂ ಇ-ಕೆವೈಸಿ   ಮಾಡಿಕೊಳ್ಳಲು ಅವಕಾಶ ನೀಡಲಾಗಿದ್ದು, ಈ ಕುರಿತು ಗೊಂದಲವಿದ್ದರೂ ತಮ್ಮ ಹತ್ತಿರದ ಸಮೀಪದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಬೇಕು. 
  2022ರ ಜುಲೈ 31 ರೊಳಗಾಗಿ ಇ-ಕೆವೈಸಿ ಮಾಡಿಸದಿದ್ದಲ್ಲಿ ಫಲಾನುಭವಿಗಳಿಗೆ ಮುಂದಿನ ಚಾತುರ ಮಾಸಿಕ ಆರ್ಥಿಕ ನೆರವು ಸಿಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.