ಪಿ.ಎಸ್.ಐ.ನೇಮಕಾತಿ ಅಕ್ರಮ ಬಂಧಿತ ಪೊಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ನಡೆಯಲಿ

ಕಲಬುರಗಿ,ಜು.14-ಪಿ.ಎಸ್.ಐ. ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತವಾಗಿರುವ ಹಿರಿಯ ಪೆÇಲೀಸ್ ಅಧಿಕಾರಿಗಳ ಮಂಪರು ಪರೀಕ್ಷೆ ನಡೆಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.
ಇಲ್ಲಿನ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿ.ಎಸ್.ಐ.ನೇಮಕಾತಿ ಅಕ್ರಮದಲ್ಲಿ ಕೇವಲ ಅಧಿಕಾರಿಗಳನ್ನು ಮಾತ್ರ ಬಂಧಿಸಿದರೆ ಸಾಕಾಗುವುದಿಲ್ಲ. ಈ ಪ್ರಕರಣದಲ್ಲಿ ಶಾಮಿಲ್ ಆಗಿರುವ ಪ್ರತಿಯೊಬ್ಬರನ್ನ ಬಂಧಿಸಬೇಕು, ಬಂಧಿತ ಅಧಿಕಾರಿ ಅಮೃತ ಪೌಲ್ ಮತ್ತು ಡಿವೈಎಸ್ಪಿ ಶಾಂತಕುಮಾರ್ ನನ್ನ ನಂಬರು ಪರೀಕ್ಷೆಗೆ ಒಳಪಡಿಸಬೇಕು, ಅಂದಾಗ ಮಾತ್ರ ಎಲ್ಲವೂ ಹೊರಗೆ ಬರಲು ಸಾಧ್ಯವಿದೆ ಎಂದರು.
ಪಿ.ಎಸ್.ಐ ಹಗರಣದಲ್ಲಿ ಸಿದ್ದರಾಮಯ್ಯ ಅವರೇ ಪ್ರಮುಖ ಪಾತ್ರಧಾರಿ ಎನ್ನುವ ಸಚಿವ ಅಶ್ವಥನಾರಾಯಣ ಹೇಳಿಕೆಗೆ ಸಿದ್ರಾಮಯ್ಯ ಕೆಂಡಾಮಂಡಲರಾದರು. ನಾನು ಸಿಎಂ ಇದ್ದಾಗ ಅವರು ವಿರೋಧ ಪಕ್ಷದಲ್ಲಿದ್ದರು ತಾನೇ ? ಆಗ ಇವರು ಯಾಕೆ ಮಾತಾಡಲಿಲ್ಲ ? ಈಗೇಕೆ ಮಾತನಾಡುತ್ತಿದ್ದಾರೆ ? ಆಗ ಅಶ್ವಥನಾರಾಯಣ ಕಡುಬು ತಿನ್ನುತ್ತಿದ್ದರೆ ? ಆಗ ಅವರ ಬಾಯಲ್ಲಿ ಕಡುಬು ಇತ್ತಾ ಎಂದು ಪ್ರಶ್ನಿಸಿದರು.