ಪುಣೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ


ಪುಣೆ.ಏ.೨- ಮಹಾರಾಷ್ಟ್ರದಲ್ಲಿ ದಿನನಿತ್ಯ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ.ಇದೀಗ ಅದರ ಸಾಲಿಗೆ ಪುಣೆಯೂ ಕೂಡ ಸೇರ್ಪಡೆಯಾಗಿದೆ.
ಪುಣೆಯಲ್ಲಿ ಸಂಜೆ ೬ ಗಂಟೆಯಿಂದ ಬೆಳಗ್ಗೆ ೬ ಗಂಟೆಯ ತನಕ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ.
ನಾಳೆ ಬೆಳಗ್ಗೆಯಿಂದಲೇ ರಾತ್ರಿ ಕರ್ಫ್ಯೂ ಜಾರಿ ಬರಲಿದ್ದು ಮುಂದಿನ ಒಂದು ವಾರಗಳ ಕಾಲ ಜಾರಿಯಲ್ಲಿದೆ ಎಂದು ಮಹಾನಗರ ಪಾಲಿಕೆ ತಿಳಿಸಿದೆ.
ಮುಂದಿನ ಏಳು ದಿನಗಳ ಕಾಲ ಕಡ್ಡಾಯವಾಗಿ ಧಾರ್ಮಿಕ ಕೇಂದ್ರಗಳು, ಹೋಟೆಲ್‌ಗಳು, ಬಾರುಗಳು ಅಂಗಡಿ ಮುಗ್ಗಟ್ಟುಗಳು, ಮಲ್ಟಿಪ್ಲೆಕ್ಸ್ ಗಳು ಮತ್ತು ಚಿತ್ರಮಂದಿರಗಳನ್ನು ಕಡ್ಡಾಯವಾಗಿ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.
ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಯನ್ನು ಬಂದ್ ಮಾಡುವಂತೆ ಮಹಾನಗರ ಪಾಲಿಕೆ ಸೂಚನೆ ನೀಡಿದೆ