ಪುಣ್ಯನಂದಾ ಪುರಿ ಸ್ವಾಮಿ ಪುಣ್ಯಸ್ಮರಣೆ

ಕೋಲಾರ,ಏ.೪: ಅಖಿಲ ಕರ್ನಾಟಕ ವಾಲ್ಮೀಕಿ ನಾಯಕರ ಮಹಾ ಸಭಾ ಕೋಲಾರ ವತಿಯಿಂದ ನಗರದ ಕೋಟೆ ಪ್ರದೇಶದಲ್ಲಿರುವ ವಾಲ್ಮೀಕಿ ಭವನದಲ್ಲಿಪರಮ ಪೂಜ್ಯ ಪುಣ್ಯಾನಂದಪುರಿ ಮಹಾಸ್ವಾಮಿಗಳ ೧೪ನೇ ಪುಣ್ಯಸ್ಮರಣೆಯನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಸಮಾಜದ ಎಲ್ಲಾ ಮುಖಂಡರು ಭಾಗವಹಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಮುಖಂಡರಾದ ನರಸಿಂಹಯ್ಯ, ಕೆ.ಎಸ್.ಆರ್.ಟಿ.ಸಿ ಮುನಿಯಪ್ಪ, ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾದ ಕೋಲಾರ ತಾಲೂಕು ಅಧ್ಯಕ್ಷ ಆನಂದ್, ಕಾರ್ಯದರ್ಶಿ ಕೋಟೆ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ನವೀನ್‌ಕುಮಾರ್, ಉಪಾಧ್ಯಕ್ಷ ಚಿದಾನಂದ್, ಸಮಾಜದ ಬಂಧುಗಳು ಹಾಜರಿದ್ದರು.