ಪುನರ್ವಸತಿ ಕಲ್ಪಿಸಲು ಆಗ್ರಹ

ಹುಬ್ಬಳ್ಳಿ, ನ16: ರಾಜಗೋಪಾಲನಗರ ಮತ್ತು ವಲ್ಲಭಭಾಯಿನಗರದ (ಸುಡಗಾಡ ಚಾಳ) ಜನರಿಗೆ ಪುನರ್ವಸತಿ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ವತಿಯಿಂದ ನವೆಂಬರ್ 18 ರಂದು ವಲ್ಲಭಭಾಯಿ ನಗರದಿಂದ ಧಾರವಾಡ ಡಿಸಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳಿಗೆ ಪರಿಹಾರ ಮತ್ತು ಪುರ್ನವಸತಿ ಕಲ್ಪಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ಮಾದಿಗ ದಂಡೋರ ರಾಜ್ಯ ಕಾರ್ಯದರ್ಶಿ ಗಂಗಾಧರ ಪೆರೂರ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಜಿಲ್ಲಾಧಿಕಾರಿಯವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ 15 ದಿನದೊಳಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಧಾರವಾಡ ಜಿಲ್ಲಾಧ್ಯಕ್ಷ ವೆಂಕಟೇಶ ಅನಂತಪುರ ಉಪಸ್ಥಿತರಿದ್ದರು.