ಪುರಾಣ ಮಂಗಲೋತ್ಸವ

ಇಲಕಲ್ಲ : ಸೆ.16:ತಾಲೂಕಿನ ಕಂದಗಲ್ ಗ್ರಾಮದ ರುದ್ರಸ್ವಾಮಿ ಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಒಂದು ತಿಂಗಳ ಕಾಲ ನಡೆದ ಶ್ರೀ ಕಲಬುರ್ಗಿ ಶರಣ ಬಸವೇಶ್ವರರ ಪುರಾಣ ಮಹಾಮಂಗಲೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರದ ಮುನ್ನ ಕಂದಗಲ್ಲ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಕುಂಭಮೇಳ ಮೆರವಣಿಗೆ ನಡೆಯಿತು. ಕಾರ್ಯಕ್ರದಲ್ಲಿ ಕಂದಗಲ್ಲದ ರುದ್ರಸ್ವಾಮಿ ಮಠದ ಡಾ. ಚನ್ನಮಲ್ಲ ಮಹಾಸ್ವಾಮಿಗಳು, ನಂದವಾಡಗಿಯ ಡಾ. ಚನ್ನಬಸವ ದೇವರು, ಮಸ್ಕಿ ಗಚ್ಚಿನಮಠದ ವರರುದ್ರಮುನಿ ಮಹಾಸ್ವಾಮಿಗಳು, ಕಮತಗಿಯ ಹೊಳಿ ಹುಚ್ಚೇಶ್ವರ ಮಹಾಸ್ವಾಮಿಗಳು, ಆಂಧ್ರದ ಮೇರಡಗಂಬದ ಪಚ್ಚಮ ಸಿದ್ದಲಿಂಗ ಮಹಾಸ್ವಾಮಿಗಳು ಮುತ್ತೈದೆಯರಿಗೆ ಉಡಿತುಂಬುವ ಕಾರ್ಯಕ್ರಮ ನಡೆಸಿಕೊಟ್ಟರು. ಗೌಡಗಾಂವದ ಪ್ರವಚನ ಭಾಸ್ಕರರಾದ ಡಾ. ಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ಕಾರ್ಯಕ್ರಮ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಕಂದಗಲ್ ಗ್ರಾಮದ ಸದ್ಭಕ್ತರು ಉಪಸ್ಥಿತರಿದ್ದರು.