ಪುಸ್ತಕಗಳು ಜೀವನದ ಸಂಗಾತಿ: ಡಾ. ಕಾಶಿನಾಥ್ ಅಂಬಲಗೆ

ಕಲಬುರಗಿ,ಮೇ.12: ಪುಸ್ತಕಗಳು ನಮ್ಮ ಜೀವನದ ಸಂಗಾತಿಯಿದ್ದಂತೆ. ಪ್ರತಿಯೊಬ್ಬರೂ ದಿನದಲ್ಲಿ ಒಂದು ಗಂಟೆ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳ ಅಧ್ಯಯನ ನಮ್ಮ ಜೀವನದಲ್ಲಿ ಹಲವು ಬದಲಾವಣೆಗಳಿಗೆ ಕಾರಣವೂ ಆಗುತ್ತದೆ ಎಂದು ಹಿರಿಯ ಸಾಹಿತಿ ಡಾ. ಕಾಶಿನಾಥ್ ಅಂಬಲಗೆ ಅವರು ಹೇಳಿದರು.
ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳು ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಗೌರವ ಪುರಸ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪುಸ್ತಕ ಓದುವುದರಿಂದ ನಮ್ಮಲ್ಲಿ ಆಲೋಚನಾ ಶಕ್ತಿ ಹೆಚ್ಚುತ್ತದೆ. ಪರಿಷತ್ತು ಇಂಥ ಕಾರ್ಯಕ್ರಮಗಳು ಆಯೋಜಿಸಿ ಪುಸ್ತಕ ಓದುವ ಸಂಸ್ಕøತಿಯನ್ನು ಹುಟ್ಟು ಹಾಕುವ ಮೂಲಕ ಮುಂದಿನ ಪೀಳಿಗೆಗೆ ನಾವು ದಾರಿ ದೀಪವಾಗುತ್ತಿವೆ ಜತೆಗೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸತ್ಕರಿಸಿ ಪ್ರೋತ್ಸಾಹಿಸುವ ಕಾರ್ಯ ಮೆಚ್ಚುವಂತಹದ್ದು ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಅವರು ಮಾತನಾಡಿ, ಪ್ರತಿಯೊಬ್ಬರೂ ಕನ್ನಡ ಭಾಷಾಭಿಮಾನವನ್ನು ಹೆಚ್ಚಾಗಿ ರೂಢಿಸಿಕೊಂಡು ನಮ್ಮ ನಾಡಿನ ಗತ ವೈಭವ ಸಂಸ್ಕøತಿ ಪರಂಪರೆಯನ್ನು ವಿಶ್ವದಾದ್ಯಂತ ಪ್ರಚುರಪಡಿಸಬೇಕು. ಇಂತಹ ಕಾರ್ಯಕ್ರಮಗಳ ಮೂಲಕ ಹೊಸ ಪೀಳಿಗೆಯಲ್ಲಿ ಮಾತೃಭಾಷಾಭಿಮಾನ ಮೂಡಿಸಿ ಉತ್ತ,ಮ ನಾಡನ್ನು ಕಟ್ಟಲಿಕ್ಕೆ ಪ್ರಯತ್ನಿಸಬೇಕಾಗಿದೆ ಎಂದರು.
ಹಿಂಗುಲಾಂಬಿಕಾ ಬಿ.ಈಡಿ. ಕಾಲೇಜಿನ ಪ್ರಿನ್ಸಿಪಾಲ್ ಗೀತಾ ಮೋರೆ ಅವರು ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕಗಳಿಕೆಯ ಜೆತಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಂಡು ಕನ್ನಡ ಸಾಹಿತ್ಯ ಹಾಗೂ ಪರಂಪರೆಯ ಬಗ್ಗೆ ಹೆಚ್ಚು ಅಧ್ಯಯನ ಮಾಡಿ ನಾಡು-ನುಡಿಯ ಬಗ್ಗೆ ಗೌರವ ಮನೋಭಾವ ಹೊಂದಬೇಕು ಎಂದರು.
ಸಾಹಿತಿ ಮುಡುಬಿ ಗುಂಡೇರಾವ್ ಅವರು ಮಾತನಾಡಿ, ವಿದ್ಯಾರ್ಥಿಗಳು ಇಂದು ಸ್ವೀಕರಿಸಿರುವ ಸನ್ಮಾನವನ್ನು ಸ್ಪೂರ್ತಿಯಾಗಿ ಪಡೆದು ಜೀವನದಲ್ಲಿ ಇನ್ನಷ್ಟು ಉತ್ತಮ ಸಾಧನೆಗಳನ್ನು ಮಾಡಲಿ ಎಂದು ಹಾರೈಸಿದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಚಂದ್ರಕಾಂತ ಏರಿ, ಡಾ. ಮಚೇಂದ್ರನಾಥ್ ಮೂಲಗೆ, ವೆಂಕುಬಾಯಿ ರಜಪೂತ್, ಕಲ್ಯಾಣಕುಮಾರ್ ಶೀಲವಂತ್, ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವರಾಜ್ ಅಂಡಗಿ, ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಪದಾಧಿಕಾರಿಗಳಾದ ರಾಜೇಂದ್ರ ಮಾಡಬೂಳ್, ಬಾಬುರಾವ್ ಪಾಟೀಲ್ ಚಿತ್ತಕೋಟಾ, ಸೋಮಶೇಖರಯ್ಯಾ ಹೊಸಮಠ್, ಶರಣಬಸವ ಜಂಗಿನಮಠ್, ರಾಜೇಶ್ವರಿ ಸಾಹು, ಓಂಪ್ರಕಾಶ್ ವಸ್ತ್ರದ್, ವಿಶ್ವನಾಥ್ ತೋಟ್ನಳ್ಳಿ, ಧರ್ಮಣ್ಣಾ ಹೆಚ್. ಧನ್ನಿ, ಹೆಚ್.ಎಸ್. ಬರಗಾಲಿ, ಎಸ್.ಎಂ.ಪಟ್ಟಣಕರ್, ಪ್ರಮುಖರಾದ ಸೋಮಶೇಖರ್ ನಂದಿಧ್ವಜ, ಸುನೀಲ್ ಹಡಪದ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಸುಮಾರು ಐವತ್ತಕ್ಕೂ ಹೆಚ್ಚು ಜಿಲ್ಲೆಯ ಸಾಧಕ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.