ಪೂಜ್ಯ ಗುರುಲಿಂಗ ಶಿವಾಚಾರ್ಯರ ಅಗಲಿಕೆಗೆ ಬಸವೇಶ್ವರ ಸಮಾಜ ಸೇವಾ ಬಳಗ ಶರಣಾಂಜಲಿ

ಕಲಬುರಗಿ: ಜ.15:ಮಹಾಗಾಂವ ಕಳ್ಳಿಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಗುರುಲಿಂಗ ಶಿವಾಚಾರ್ಯರು ಅಕಾಲಿಕ ಲಿಂಗೈಕ್ಯರಾಗಿದ್ದು ತುಂಬಾ ನೋವಿನ ಸಂಗತಿಯಾಗಿದ್ದು, ಆಧ್ಯಾತ್ಮಿಕ ಕ್ಷೇತ್ರಕ್ಕೆ ನಷ್ಟವಾಗಿದೆ. ಅವರ ಅಪಾರ ಭಕ್ತರಿಗೆ ದುಃಖ ಉಂಟಾಗಿದೆ. ಎಲ್ಲರೊಂದಿಗೆ ಬೆರೆಯುವ ಸರಳ ಸ್ವಭಾವದ ಪೂಜ್ಯರು, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದರು ಎಂದು ಬಸವೇಶ್ವರ ಸಮಾಜ ಸೇವಾ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ ಶರಣಾಂಜಲಿ ಸಲ್ಲಿಸಿದ್ದಾರೆ.

    ಮಹಾಗಾಂವ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ನಮ್ಮ ಬಳಗದ ವತಿಯಿಂದ ವನಮಹೋತ್ಸವ ದಿನಾಚರಣೆ ಪ್ರಯುಕ್ತ ಕಳೆದ ಜೂನ್ ತಿಂಗಳಿನಲ್ಲಿ ಪೂಜ್ಯರು ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಿದ್ದ ಪರಿಸರ ಕಾಳಜಿಯನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದ್ದಾರೆ.

  ಬಳಗದ ಉಪಾಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ಕಾರ್ಯದರ್ಶಿ ರಾಜಶೇಖರ ಬಿ.ಮರಡಿ, ಸಹ ಕಾರ್ಯದರ್ಶಿ ಸೋಮಶೇಖರ ಬಿ.ಮೂಲಗೆ, ಸಂಚಾಲಕ ವೀರೇಶ ಬೋಳಶೆಟ್ಟಿ ನರೋಣಾ, ಸಹ ಸಂಚಾಲಕ ಶಿವಕಾಂತ ಚಿಮ್ಮಾ, ಗೌರವ ಸಲಹೆಗಾರ ಚಂದ್ರಕಾಂತ ಬಿರಾದಾರ, ನೀಲಕಂಠಯ್ಯ ಹಇರೇಮಠ, ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ ಸೇರಿದಂತೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ