ಪೂರ್ವಭಾವಿ ಸಭೆ

ಧಾರವಾಡ, ಆ 5: ಆಗಸ್ಟ್ 12 ರಂದು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಜಿಲ್ಲೆಯಾದ್ಯಂತ ಪ್ರಥಮ ಭಾರಿಗೆ ಕೋರಮ, ಕೊಂಚ, ಭಜಂತ್ರಿ ಸಮುದಾಯದ ಶ್ರೇಷ್ಠ ಕಾಯಕ ಯೋಗಿ ಶಿವಶರಣ ನುಲಿಯ ಚಂದಯ್ಯನವರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಭವನದಲ್ಲಿ ಕಾಯಕ ಯೋಗಿ ಶಿವಶರಣ ನುಲಿಯ ಚಂದಯ್ಯನವರ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಗಸ್ಟ್ 12 ರಂದು ಬೆಳಿಗ್ಗೆ 9 ಗಂಟೆಗೆ ಕಾಯಕ ಯೋಗಿ ನುಲಿಯ ಚಂದ್ಯನವರ ಭಾವಚಿತ್ರದ ಭವ್ಯ ಮೆರವಣಿಗೆ ಕಲಾ ಭವನದಿಂದ ಆರಂಭಗೊಂಡು ಆಲೂರು ವೆಂಕಟರಾಯರ ಸಭಾ ಭವನಕ್ಕೆ ಬಂದು ತಲುಪಲಿದೆ. ನಂತರ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ತರಗತಿಯಲ್ಲಿ ಜಿಲ್ಲೆಗೆ ಪ್ರಥಮ ಬಂದ ವಿದ್ಯಾರ್ಥಿಗಳಿಗೆ ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಸಾಹಿತಿ ನಾರಾಯಣ ಅವರು ವಿಶೇಷ ಉಪನ್ಯಾಸ ನೀಡುವರು ಎಂದು ಹೇಳಿದರು.
ಸಭೆಯಲ್ಲಿ ಸಮಾಜದ ಮುಖಂಡರಾದ ನಾರಾಯಣ ಬಿ. ಭಜಂತ್ರಿ, ಚಂದ್ರಶೇಖರ್ ಗೋಕಾಕ, ಹನಮಂತ ಕೋರವರ, ಬಸವರಾಜ ಗುಡೆಹಳ್ಳಿ, ನಾರಾಯಣ ಭಂಜತ್ರಿ, ಸದಾಶಿವ ನಾಗೇಶ, ಸಾಯಿಕುಮಾರ ಎಸ್. ಹಳ್ಳಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯ ನಿರ್ದೇಶಕ ಕುಮಾರ ಬೆಕ್ಕೇರಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.