ಪೂರ್ವಭಾವಿ ಸಿದ್ಧತಾ ಸಭೆ

ಧಾರವಾಡ, ಆ.5: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ಕಚೇರಿ ಸಭಾಂಗಣದಲ್ಲಿ ಮಿಷನ್ ಇಂದ್ರ ಧನುಷ್ ಲಸಿಕಾ ಅಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪೂರ್ವಭಾವಿ ಸಿದ್ಧತಾ ಸಭೆ ಜರುಗಿತು.

ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು ಮಿಷನ್ ಇಂದ್ರ ಧನುಷ ಲಸಿಕಾ ಅಭಿಯಾನದ ಯಶಸ್ವಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಕಾರ್ಯಕರ್ತರು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.
ಅಭಿಯಾನದ ಮೇಲ್ವಿಚಾರಣೆಗೆ ನೊಡಲ್ ಅಧಿಕಾರಿಗಳನ್ನು ನೇಮಿಸಬೇಕು. ಮತ್ತು ಕ್ಷೇತ್ರಮಟ್ಟದ ಮಾಹಿತಿಯನ್ನು ಪ್ರತಿದಿನ ನಿಗದಿತ ನಮೂನೆಯಲ್ಲಿ ಮೇಲಾಧಿಕಾರಿಗಳಿಗೆ ಸಲ್ಲಿಸಬೇಕೆಂದು ಅವರು ತಿಳಿಸಿದರು.   

ಅಭಿಯಾನದಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಮಾಡಬೇಕು 0-1 ವರ್ಷದ ಮಕ್ಕಳ ಲಸಿಕೆ ಪ್ರಮಾಣ ಕಡಿಮೆ ಇದ್ದು ಲಸಿಕೆ ಪ್ರಕ್ರಿಯೆಯು ಹೆಚ್ಚಿನ ಸಂಖ್ಯೆಯಲ್ಲಿ ಆಗಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ್ ಟಿ.ಕೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಶಿ ಪಾಟೀಲ್, ಡಿಡಿಪಿಐ ಎಸ್.ಎಸ್. ಕೆಳದಿಮಠ, ಆರ್‍ಸಿಹೆಚ್‍ಓ ಡಾ.ಎಸ್.ಎಮ್. ಹೊನಕೇರಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೈಲ್ವೆ ಇಲಾಖೆ, ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ, ಕಿಮ್ಸ್, ಎಸ್‍ಡಿಎಮ್ ವೈದ್ಯಕೀಯ ಮಹಾವಿದ್ಯಾಲಯ ಸಿಬ್ಬಂದಿಗಳು ಹಾಜರಿದ್ದರು.