ಪೆಟ್ರೋಲ್, ಡಿಸೇಲ್ ದರ ಸ್ಥಿರ

ನವದೆಹಲಿ, ಡಿ.೮-ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ನಿರಂತರ ಏರಿಳಿತ ಕಾಣುತ್ತಿದ್ದರೂ,ಭಾರತದಲ್ಲಿ ಇಂಧನ ದರದಲ್ಲಿ ಬದಲಾವಣೆ ಕಂಡಿಲ್ಲ. ಎಲ್ಲಾ ಕಡೆಗಳಲ್ಲಿ ಪೆಟ್ರೋಲ್, ಡಿಸೇಲ್ ದರ ಸ್ಥಿರವಾಗಿದೆ.
ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿ ತಿಂಗಳು ಕಳೆದರೂ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಬುಧವಾರವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಪರಿಷ್ಕರಣೆ ಮಾಡಿಲ್ಲ.
ನವದೆಹಲಿಯಲ್ಲಿ ಬುಧವಾರದಂದು ಪೆಟ್ರೋಲ್ -ಡೀಸೆಲ್ ಬೆಲೆ ಪರಿಷ್ಕರಿಸಿಲ್ಲ. ಇಂದು ಪೆಟ್ರೋಲ್ ದರ ೯೫.೪೧ ರೂ., ಪ್ರತಿ ಲೀಟರ್ ಡೀಸೆಲ್ ದರವು ೮೬.೬೭ ರೂ. (ಲೀಟರ್)ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ ೬ ಗಂಟೆಯಿಂದ ಪರಿಷ್ಕರಿಸುತ್ತವೆ.
ಇನ್ನೂ, ತೆರಿಗೆ ಕಡಿತದ ನಂತರ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ೧೦೦ ರೂ.ಗಿಂತ ಕಡಿಮೆಯಾಗಿದೆ.ಅಲ್ಲದೆ, ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು.
ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲೂ ತೆರಿಗೆ ತಗ್ಗಿಸಲಾಗಿದೆ. ತಮಿಳುನಾಡು, ಪುದುಚೇರಿ ರಾಜ್ಯಗಳಲ್ಲಿ ಬಜೆಟ್ ವೇಳೆ ತಗ್ಗಿಸಿರುವುದರಿಂದ ಮತ್ತೊಮ್ಮೆ ವ್ಯಾಟ್ ತಗ್ಗಿಸುವುದಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿವೆ.