ಪೆಟ್ರೋಲ್, ಡೀಸೆಲ್ ಗ್ಯಾಸ್ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ

ಮೈಸೂರು, ಡಿ.24: ಪೆಟ್ರೋಲ್, ಡೀಸೆಲ್ ಗ್ಯಾಸ್ ಬೆಲೆಯನ್ನು ಪದೇ ಪದೇ ಏರಿಸುತ್ತಿರುವ ಕೇಂದ್ರ, ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಮೈಸೂರು ಜಿಲ್ಲಾ ಪ್ರವಾಸಿ ಬಸ್ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿ ಎದುರು ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಡೀಸೆಲ್ ಪೆಟ್ರೋಲ್, ಗ್ಯಾಸ್ ಬೆಲೆಯನ್ನು ಪದೇ ಪದೇ ಕೇಂದ್ರ ಮತ್ತು ರಾಜ್ಯ ಸರ್ಕಾರ ಏರಿಕೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಮಾಲೀಕರಿಗೆ ತೊಂದರೆಯಾಗಿದೆ. ಡೀಸೆಲ್, ಪೆಟ್ರೋಲ್, ಗ್ಯಾಸ್ ಬೆಲೆಯನ್ನು ಇಳಿಕೆ ಮಾಡಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪೃಥ್ವಿರಾಜ್, ರಾಜಶೇಖರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.