ಪೆಟ್ರೋಲ್, ಡೀಸೆಲ್ ಜಿಎಸ್ಟಿ ವ್ಯಾಪ್ತಿಗೆ ತರುವ ಪ್ರಸ್ತಾಪವಿಲ್ಲ: ನಿರ್ಮಲಾ

ನವದೆಹಲಿ, ಮಾ 15-ಪೆಟ್ರೋಲ್, ಡೀಸೆಲ್ ಡೀಸೆಲ್ ವ್ಯಾಪ್ತಿಗೆ ತರುವ ಪ್ರಸ್ತಾಪ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ತಿಳಿಸಿದ್ದಾರೆ.
ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್, ವಿಮಾನ ಇಂಧನ (ಎಟಿಎಫ್) ಮತ್ತು ನೈಸರ್ಗಿಕ ಅನಿಲವನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ತರುವ ಪ್ರಸ್ತಾವ ಹಂತದಲ್ಲಿ ಇಲ್ಲ ಎಂದು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ವಿವರಿಸಿದ್ದಾರೆ.
ಇಂಧನವನ್ನು ಯಾವಾ್ ಜಿಎಸ್‌ಟಿ ವ್ಯವಸ್ಥೆಯ ಅಡಿ ತರಬೇಕೆಂಬ ಬಗ್ಗೆ ಜಿಎಸ್‌ಟಿ ಮಂಡಳಿ ಶಿಫಾರಸು ಮಾಡಬೇಕು ಎಂಬುದಾಗಿ ಕಾನೂನು ಹೇಳುತ್ತದೆ. ಆದರೆ, ರಾಜ್ಯಗಳಿಗೂ ಪ್ರಾತಿನಿಧ್ಯ ಇರುವ ಜಿಎಸ್‌ಟಿ ಮಂಡಳಿಯು ಇದುವರೆಗೆ ಈ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂಬ ಶಿಫಾರಸು ಮಾಡಿಲ್ಲ ಎಂದು ಅವರು‌ ಸ್ಪಷ್ಟಪಡಿಸಿದ್ದಾರೆ.
ಆದಾಯ ಸಂಗ್ರಹದ ಮೇಲೆ ಆಗುವ ಪರಿಣಾಮ ಸೇರಿದಂತೆ ಎಲ್ಲ ಬಗೆಯ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು, ಈ ಉತ್ಪನ್ನಗಳನ್ನು ಯಾವಾಗಿನಿಂದ ಜಿಎಸ್‌ಟಿ ವ್ಯವಸ್ಥೆ ಅಡಿಯಲ್ಲಿ ತರಬಹುದು ಎಂಬುದನ್ನು ಜಿಎಸ್‌ಟಿ ಮಂಡಳಿ ಪರಿಶೀಲಿಸಬಹುದು ಎಂದು ಅವರು ಹೇಳಿದರು.