ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಟಿ. ನರಸಿಪುರ: ಜೂ.08: ಗ್ರಾಮಾಂತರ ಯುವ ಕಾಂಗ್ರೆಸ್ ವತಿಯಿಂದ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಇಂದು ಪಟ್ಟಣದ ಪ್ರತಿಭಟನೆ ನಡೆಸಿದರು.
ನೂರರ ಗಡಿ ದಾಟಿರುವ ಪೆಟ್ರೋಲ್ ದರ, ಸಾಮಾನ್ಯ ಹಾಗೂ ಮಧ್ಯಮ ವರ್ಗದ ಜನರ ಸ್ಥಿತಿ ಅಧೋಗತಿ ಬಿಜೆಪಿ ಸರ್ಕಾರ ಬಂದರಿಂದ ಬಾರಿ ಡೀಸೆಲ್ ಪೆಟ್ರೋಲ್ ದರ ಹೆಚ್ಚಳ, ಕರೋನಾ ನೆಪವೊಡ್ಡಿ ಲೂಟಿ ಹೊಡೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬೆಲೆ ಹೆಚ್ಚಿಸಿರುವುದನ್ನು ಖಂಡಿಸಿ ಪ್ರತಿಭಡನೆ ಮಾಡಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರೊನಾಲ್ಡ್, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಮ್ಜದ್ ಖಾನ್, ಸಹದೇವ್, ಲಿಂಗರಾಜ ಹಾಗೂ ಮುಂತಾದವರು ಇದ್ದರು.