ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ಲೋಕಕಲ್ಯಾಣಾರ್ಥವಾಗಿ ಧನ್ವಂತರಿ ಹೋಮ

ಸುಳ್ಯ, ಮೇ ೨೭- ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಧನ್ವಂತರಿ ಹೋಮವು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ರವರ ನೇತೃತ್ವದಲ್ಲಿ ಮಂಗಳವಾರ ನಡೆಯಿತು. ದೇಶಕ್ಕೆ ಬಾಧಿಸಿರುವ ಕೊರೊನಾ ರೋಗ ನಿಯಂತ್ರಣದ ಬಗ್ಗೆ ರೋಗ ತಡೆಗಟ್ಟುವಂತೆಯೂ ಶ್ರೀ ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಲಾಯಿತು.
ವೇದ ಪಾರಾಯಣ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ವೆಂಕಟಕೃಷ್ಣ ರಾವ್, ಜಯಪ್ರಕಾಶ್ ರೈ.ಬಿ, ದಾಮೋದರ ನಾಯ್ಕ, ಭಾಗ್ಯಲಕ್ಷ್ಮೀ, ಪಿ.ಜಗನ್ನಾಥ ರೈ, ನಾರಾಯಣ ಕೆ., ಯಶೋಧ ಎ.ಎಸ್. ಮತ್ತು ದೇವಸ್ಥಾನದ ಕಚೇರಿ ವ್ಯವಸ್ಥಾಪಕ ವಸಂತ ಆಚಾರ್ಯ ರವರು ಉಪಸ್ಥಿತರಿದ್ದರು.