ಪೆÇಲೀಸ್ ಕಾನ್ಸ್‍ಟೇಬಲ್ ಹಾಗೂ ಬಸ್ ಕಂಡಕ್ಟರ್ ಪರಸ್ಪರ ಹೊಡೆದಾಟ್ಟ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಮೇ.31:-ಟಿಕೆಟ್ ವಿಚಾರಕ್ಕೆ ಸಾರ್ವಜನಿಕವಾಗಿ ಪೆÇಲೀಸ್ ಕಾನ್ಸ್‍ಟೇಬಲ್ ಹಾಗೂ ಬಸ್ ಕಂಡಕ್ಟರ್ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಗುಂಡ್ಲುಪೇಟೆ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.
ಗುಂಡ್ಲುಪೇಟೆ ಡಿಪೆÇೀ ಕಂಡಕ್ಟರ್ ಲೋಕೇಶ್ ಹಾಗೂ ಮೈಸೂರು ಸಶಸ್ತ್ರ ಮೀಸಲು ಪಡೆ ಕಾನ್ಸ್‍ಟೇಬಲ್ ಕೊಟ್ರೇಶ್ ಹೊಡೆದಾಡಿಕೊಂಡಿದ್ದಾರೆ. ಗುಂಡ್ಲುಪೇಟೆ ಪೆÇಲೀಸ್ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
ಘಟನೆಯ ವಿವರ: ಕೊಟ್ರೇಶ್ ಕುಟುಂಬ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ಬೆಟ್ಟದಿಂದ ಬಸ್ ಮೂಲಕ ಗುಂಡ್ಲುಪೇಟೆಗೆ ವಾಪಸ್ ಆಗುತ್ತಿದ್ದರು. ಕೊಟ್ರೇಶ್ ಚಿಕ್ಕಮ್ಮ ಬಸ್ ಮುಂದಿನ ಸೀಟ್‍ನಲ್ಲಿ ಕುಳಿತಿದ್ದರೆ ಕೊಟ್ರೇಶ್ ಹಿಂದೆ ಇದ್ದರು. ಕೊಟ್ರೇಶ್ ಅವರ ಟಿಕೆಟ್ ಅ?ನ್ನು ಚಿಕ್ಕಮ್ಮ ತೆಗೆದುಕೊಂಡಿದ್ದರು. ಈ ವಿಚಾರ ತಿಳಿಯದೇ ಕೊಟ್ರೇಶ್ ಕೂಡಾ ಟಿಕೆಟ್ ಪಡೆದುಕೊಂಡಿದ್ದಾರೆ. ಬಸ್‍ನಿಂದ ಇಳಿದ ಬಳಿಕ ಎರಡು ಬಾರಿ ಟಿಕೆಟ್ ಪಡೆದ ವಿಚಾರಕ್ಕೆ ಕಂಡಕ್ಟರ್ ಲೋಕೇಶ್ ಹಾಗೂ ಕಾನ್ಸ್‍ಟೇಬಲ್ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ, ಇಬ್ಬರೂ ಹಲ್ಲೆ ಮಾಡಿಕೊಂಡಿದ್ದಾರೆ.
ಕಾನ್ಸ್‍ಟೇಬಲ್ ಸಿವಿಲ್ ಡ್ರೆಸ್‍ನಲ್ಲಿದ್ದ ಕಾರಣ ಸಾರಿಗೆ ಸಂಸ್ಥೆಯ ಇತರೆ ಚಾಲಕರು, ಕಂಡಕ್ಟರ್‍ಗಳು ಕೂಡ ಕೊಟ್ರೇಶ್ ಮೇಲೆ ಹಲ್ಲೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಘಟನೆಯ ಬಳಿಕ ಗುಂಡ್ಲುಪೇಟೆ ಠಾಣೆಯಲ್ಲಿ ಇಬ್ಬರೂ ದೂರು-ಪ್ರತಿದೂರು ನೀಡಿದ್ದಾರೆ.