ಪೊಲೀಸರಿಂದ ಪಥ ಸಂಚಲನ

ಮಾಲೂರು.ಸೆ೧೯:೧೯ ಗೌರಿ ಗಣೇಶ ಹಬ್ಬವನ್ನು ಯಾವುದೇ ರೀತಿಯ ಅನಾಹುತಗಳು ಆಗದಂತೆ ಶಾಂತಿಯುತವಾಗಿ ಆಚರಿಸಲು ಮುನ್ನೆಚ್ಚರಿಕೆಯಾಗಿ ಪಟ್ಟಣದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಟ್ಟಣದ ಪೊಲೀಸರು ಪೊಲೀಸ್ ನಿರೀಕ್ಷಕ ವಸಂತ್ ಕುಮಾರ್ ಅವರ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥಸಂಚಲನೆ ನಡೆಸಿದರು
ಗಣೇಶ ಹಬ್ಬದ ಪ್ರಯುಕ್ತ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ದೇವಾಲಯಗಳ ಬಳಿ ಸಂಘ ಸಂಸ್ಥೆಗಳು ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮೂರು ದಿನ ೧೫ ದಿನ ೪೫ ದಿನಗಳ ಕಾಲ ವಿಶೇಷ ಪೂಜೆಗಳನ್ನು ಸಲ್ಲಿಸಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಗಣೇಶೋತ್ಸವವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಾರೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ ಸಂದರ್ಭದಲ್ಲಿ ಯುವಕರು ಯಾವುದೇ ರೀತಿಯ ಅನಾಹುತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಗಣೇಶ ಮೂರ್ತಿಯನ್ನು ಬಿಡುವ ವೇಳೆ ನಡೆಸುವ ಮೆರವಣಿಗೆಗಳಲ್ಲಿಯೂ ಸಹ ಎಚ್ಚರಿಕೆ ವಹಿಸಬೇಕು ಎಂದರು
ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ ಕದಡುವ ಕೆಲಸವನ್ನು ಯಾರೇ ಮಾಡಲಿ ಮುಲಾಜಿಲ್ಲದೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು
ಈ ಸಂದರ್ಭದಲ್ಲಿ ಮಾಸ್ತಿ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಸಬ್ ಇನ್ಸ್ಪೆಕ್ಟರ್ ರವೀಂದ್ರ ಗೌಡ ಎ ಎಸ್ ಐ ಗಳು ಪೊಲೀಸ್ ಸಿಬ್ಬಂದಿ ಪ ಥಸಂಚಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.