ಪೊಲೀಸರಿಗೆ ನಟಿ ಹಯಾತಿ ಟಾಂಗ್

ಮುಂಬೈ, ಮೇ.೩೦-ಸಿನಿಮಾಗಳಿಗಿಂತ ಕಿರಿಕ್ ಸುದ್ದಿಗಳಿಂದಲೇ ಹೆಚ್ಚೆಚ್ಚು ಸುದ್ದಿ ಮಾಡಿದವರು ಡಿಂಪತ್ ಹಯಾತಿ. ಈ ಹಿಂದೆಯೂ ನಾನಾ ರೀತಿಯ ವಿವಾದಗಳನ್ನು ಮೈಮೇಲೆ ಎಳೆದುಕೊಂಡವರು. ಮೊನ್ನೆಯಷ್ಟೇ ಐಪಿಎಸ್ ಅಧಿಕಾರಿ ಜೊತೆ ಡಿಂ ಕಿರಿಕ್ ಮಾಡಿಕೊಂಡು ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ.
ಪೊಲೀಸ್ ಅಧಿಕಾರಿ ರಾಹುಲ್ ಹೆಗ್ಡೆ ಸೌತ್ ನಟಿ ಡಿಂಪಲ್ ಹಯಾತಿ ನಡುವಿನ ಜಗಳ ತಾರಕಕ್ಕೇರಿದೆ. ಪಾರ್ಕಿಂಗ್ ವಿಚಾರಕ್ಕೆ ಶುರುವಾದ ಕಿತ್ತಾಟ ಈಗ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಪೊಲೀಸ್ ಅಧಿಕಾರಿಯ ಕಾರನ್ನು ಡ್ಯಾಮೇಜ್ ಮಾಡಿದ ಆರೋಪದ ಮೇಲೆ ನಟಿ ಡಿಂಪಲ್ ಹಯಾತಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಈ ನಡುವೆಯೇ ನಟಿ ಈ ವಿಚಾರವನ್ನು ಇಲ್ಲಿಗೆ ಬಿಡುವಂತೆ ಕಾಣುತ್ತಿಲ್ಲ. ಪೊಲೀಸ್ ಅಧಿಕಾರಿಗೆ ಟಾಂಗ್ ಕೊಡುವುದಕ್ಕಾಗಿ ನಟ ಬಾಲಯ್ಯ ನಟಿಸಿರುವ ಸಿಂಹ ಚಿತ್ರದ ವಿಡಿಯೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಈ ವಿಡಿಯೋದಲ್ಲಿ ಅನ್ಯಾಯ ವಾದಾಗೆಲ್ಲ ‘ನೋ ಪೊಲೀಸ್ ಎನ್ನುವ ಡೈಲಾಗ್ ಇದೆ. ತಮಗೆ ಅನ್ಯಾಯವಾಗಿದೆ. ಹಾಗಾಗಿ ನೋ ಪೊಲೀಸ್ ಎನ್ನುವ ಅರ್ಥದಲ್ಲಿ ಅವರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.