ಪೊಲೀಸರು ಪ್ಲಾಸ್ಮಾ ದಾನ ಡಿಜಿಪಿ ಶ್ಲಾಘನೆ

ಬೆಂಗಳೂರು,ಆ.೨-ಹಲವು ಪೊಲೀಸರು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಪ್ಲಾಸ್ಮಾ ದಾನ ಮಾಡಲು ಮುಂದಾಗಿರುವುದಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್
ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಸಮಾಜಕ್ಕೆ ನಿರೀಕ್ಷಿಸಿದಕ್ಕಿಂತ ಹೆಚ್ಚಿನ ಕೊಡುಗೆ ನೀಡುತ್ತಿದ್ದಾರೆ. ಅವರ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿ ಎಂದು
ಟ್ವೀಟ್ ಮಾಡಿದ್ದಾರೆ.
ಕೆಎಸ್‌ಆರ್‌ಪಿ ಪೊಲೀಸ್ ಕಾನ್ಸ್ ಸ್ಟೇಬಲ್ ವೀರಭದ್ರಯ್ಯ, ಕೋವಿಡ್-೧೯ ಸೋಂಕಿನಿಂದ ಗುಣಮುಖರಾದ ಬಳಿಕ ನಗರದ ಎಚ್‌ಸಿಜಿ ಆಸ್ಪತ್ರೆಯಲ್ಲಿ ತಮ್ಮ ಪ್ಲಾಸ್ಮಾ ದಾನ ಮಾಡಿದ್ದಾರೆ.
ಅವರು ಈ ಮೂಲಕ ನಮ್ಮ ಇಡೀ ಇಲಾಖೆ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಇನ್ನಷ್ಟು ಜನರು ಮುಂದೆ ಬರಲು ಅವರು ಪ್ರೇರಣೆಯಾಗಿದ್ದಾರೆ ಎಂದು ಸೂದ್ ಶ್ಲಾಘಿಸಿದ್ದಾರೆ.