ಪೊಲೀಸರ ಗುಂಡಿಗೆ ೧೪ ಮಂದಿ ನಕ್ಸಲರ ಸಾವು


ಗಡ್ಚಿರೋಲಿ (ಮಹಾರಾಷ್ಟ್ರ),ಮೇ.೨೧- ಅರಣ್ಯ ಪ್ರದೇಶದಲ್ಲಿ ಚಟುವಟಿಕೆಗಳನ್ನು ನಡೆಸುತ್ತಿದ್ದ ನಕ್ಸಲರ ವಿರುದ್ಧ ಕಾರ್ಯಾಚರಣೆ ಕೈಗೊಂಡ ರಾಜ್ಯ ಪೊಲೀಸರು ೧೪ ಮಂದಿ ಎನ್ ಕೌಂಟರ್ ಮಾಡಿದ್ದಾರೆ.
ಗಡ್ಚಿರೋಲಿ ಜಿಲ್ಲೆಯ ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ನಕ್ಸಲರು ಹಾಗೂ ಮಹಾರಾಷ್ಟ್ರ ಪೊಲೀಸರ ನಡುವೆ ನಡೆಯುತ್ತಿರುವ ಗುಂಡಿನ ಕಾಳಗದಲ್ಲಿ ೧೪ ನಕ್ಸಲರನ್ನು ಹೊಡೆದುರುಳಿಸಲಾಗಿದೆ.
ಇಲ್ಲಿಯವರೆಗೆ ೧೪ ನಕ್ಸಲರನ್ನು ಸಿ-೬೦ ಕಮಾಂಡೊ ಪೊಲೀಸರು ಹತೈಗೈಯ್ದಿದ್ದು, ಆರು ಮಂದಿಯ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗಡ್ಚಿರೋಲಿ ಡಿಐಜಿ ಸಂದೀಪ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆ ಕೈಗೊಂಡ -೬೦ ಕಮಾಂಡೊ ಪೊಲೀಸರನ್ನು ಕಂಡ ಕೂಡಲೇ ನಕ್ಸಲರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಪ್ರಾಣ ರಕ್ಷಣೆಗಾಗಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ೧೪ಮಂದಿ ನಕ್ಸಲರು ಸಾವನ್ನಪ್ಪಿದ್ದಾರೆ.
ಎಟಪಲ್ಲಿ ಅರಣ್ಯ ಪ್ರದೇಶದಲ್ಲಿ ಪೊಲೀಸ್ ಕಾರ್ಯಾಚರಣೆ ಮುಂದುವರೆದಿದ್ದು ಕೆಲವು ಪೊಲೀಸರಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.