ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಪದಕ

ಬೆಳಗಾವಿ,ಜ1: ಕಳೆದ ಇಪ್ಪತ್ತು ವರ್ಷಗಳಿಂದ ಭಾರತದ ವಿವಿಧ ವಿಭಾಗಗಳಲ್ಲಿ ದಕ್ಷ ಪೆÇಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಹಾಗೂ ಬೆಳಗಾವಿ ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಅವರಿಗೆ ಮುಖ್ಯಮಂತ್ರಿ ಪದಕ ದೊರೆತಿದೆ.
ಬೆಳಗಾವಿಯಂತಹ ಸೂಕ್ಷ್ಮ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಇಬ್ಬರು ಅಧಿಕಾರಿಗಳು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಅನೇಕ ಕಟ್ಟುನಿಟ್ಟಿನ ಕ್ರಮಗಳ ಮೂಲಕ ಸಮಾಜ ಘಾತುಕ ಚಟುವಟಿಕೆಗಳ ಮಟ್ಟ ಹಾಕುವ ಮೂಲಕ ಜನಸಾಮಾನ್ಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 121 ಪೆÇಲೀಸ್ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಮುಖ್ಯಮಂತ್ರಿ ಪದಕ ದೊರೆತಿದೆ.
ಇವರೊಂದಿಗೆ ಬಾಗಲಕೋಟೆ ಜಿಲ್ಲೆಯ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಚಿಕ್ಕಬಳ್ಳಾಪುರ ಪೆÇಲೀಸ್ ವರಿಷ್ಠಾಧಿಕಾರಿ ಮಿಥುನಕುಮಾರ ಜಿ.ಕೆ, ಶಿವಮೊಗ್ಗ ಜಿಲ್ಲೆಯ ಕೆ.ಎಂ.ಶಾಂತಕುಮಾರ ಪದಕಕ್ಕೆ ಭಾಜನರಾಗಿದ್ದಾರೆ.