ಪೊಲೀಸ್ ಅಧಿಕಾರಿಗೆ ಬಿಳ್ಕೋಡುಗೆ

ಕೋಲಾರ,ಏ,೭-ಪ್ರತಿಯೊಬ್ಬ ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಜನಾಂಗಕ್ಕೆ ಆದರ್ಶವಾಗುವ ರೀತಿಯಲ್ಲಿ ಸಮಸ್ತ ನೌಕರರ, ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು ಕೆ.ಜಿ.ಎಫ್ ಜಿಲ್ಲಾ ರಕ್ಷಣಾಧಿಕಾರಿ ಡಾ|| ಕೆ.ಧರಣೀದೇವಿ ಅವರು ಕರೆ ನೀಡಿದರು.
ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಪ್ರಸ್ತುತ ರಾಮನಗರಕ್ಕೆ ವರ್ಗವಾಗಿರುವ ಜಿಲ್ಲಾ ಪೊಲೀಸ್ ಕಛೇರಿಯ ಪ್ರಥಮ ದರ್ಜೆ ಸಹಾಯಕ ಆರ್.ಟಿ. ಮೋಹನ್‌ಕುಮಾರ್ ಅವರಿಗೆ ಏರ್ಪಡಿಸಿದ್ದ, ಹಾರ್ಥಿಕ ಬಿಳ್ಕೋಡುಗೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಳೆದ ಎರಡು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿ ವರ್ಗವಾದ ಪ್ರಥಮ ದರ್ಜೆ ಸಹಾಯಕ ಆರ್.ಟಿ. ಮೋಹನ್‌ಕುಮಾರ್ ಅವರಿಗೆ ಶಾಲು ಹೊದಿಸಿ, ಆತ್ಮೀಯವಾಗಿ ಸನ್ಮಾನಿಸಿ, ಹಣ್ಣುಹಂಪಲು, ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು.
ಮುಖ್ಯ ಅತಿಥಿಗಳಾಗಿದ್ದ ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ ಅವರು ಮಾತನಾಡಿ, ಸರ್ಕಾರಿ ನೌಕರರು ಸೇವೆಯಲಿ ರುವಾಗ ನೈತಿಕ ಬೆಂಬಲದೊಂದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಸೇವೆಯ ಮೂಲಕ ನಿಷ್ಠೆಯನ್ನು ಮೈಗೂಡಿಸಿ ಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಖಾಧೀಕ್ಷಕರಾದ ಎಂ.ಮೂರ್ತಿ, ಎ.ನಜೀಮಾಬಾನು, ಆಪ್ತ ಸಹಾಯಕಿ ಜಿ.ಮಮತಾ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ಕಛೇರಿಯ ಆರ್.ಸರವಣ, ವಿ.ಮಂಜುನಾಥ ಮತ್ತಿತರರು ಸನ್ಮಾನಿತರ ಕುರಿತು ಮಾತನಾಡಿದರು.