ಪೊಲೀಸ್ ಜನಸ್ನೇಹಿ ಇಲಾಖೆಯಾಗಿರಲಿ: ಎಡಿಜಿಪಿ ಅಲೋಕಕುಮಾರ

ವಿಜಯಪುರ, ಜು.21-ಪೊಲೀಸ್ ಇಲಾಖೆಯು ಜನಸ್ನೇಹಿಯಾಗಿರಲಿ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕರಾದ ಅಲೋಕಕುಮಾರ ಅವರು ಹೇಳಿದರು.
ಜುಲೈ 20ರಂದು ನಗರದ ಜಿಲ್ಲಾ ಪೆÇಲೀಸ್ ಕವಾಯತು ಮೈದಾನದಲ್ಲಿ ಪೆÇಲೀಸ್ ಕವಾಯತು ಪರಿವೀಕ್ಷಣೆ ಬಳಿಕ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.
ಪೊಲೀಸ್ ಇಲಾಖೆಯ ಬಗ್ಗೆ ಸಾರ್ವಜನಿಕರಿಗೆ ಗೌರವ ಭಾವನೆ ಇದೆ. ಇದನ್ನರಿತು ಎಲ್ಲ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.
ಎಷ್ಟೇ ಒತ್ತಡವಿರಲಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯು ಸಾವಧಾನ ಮತ್ತು ಶಾಂತರೀತಿಯಿಂದ ಕಾರ್ಯನಿರ್ವಹಿಸಬೇಕು. ಆರೋಗ್ಯದ ಕಡೆಗೆ ಗಮನ ಕೊಡಬೇಕು. ಪ್ರತಿ ದಿನ ಒಂದಷ್ಟು ಸಮಯವನ್ನು ಯೋಗ ಮತ್ತು ಧ್ಯಾನಕ್ಕೆ ಮೀಸಲಿಡಬೇಕು ಎಂದು ತಿಳಿಸಿದರು.
ವಿವಿಧ ಪ್ರಕರಣಗಳನ್ನು ದಾಖಲಿಸುವಲ್ಲಿ ಮತ್ತು ಮೇಲಧಿಕಾರಿಗಳಿಗೆ ಮಾಹಿತಿಯನ್ನು ಸಕಾಲಕ್ಕೆ ತಲುಪಿಸುವ ವಿಷಯದಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿದ 26 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇದೆ ವೇಳೆ ಪ್ರಶಂಶಾ ಪತ್ರಗಳನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಲಯದ ಐಜಿಪಿ ಸತೀಶಕುಮಾರ, ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೆಚ್.ಡಿ.ಆನಂದಕುಮಾರ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್. ಅರಸಿದ್ದಿ, ಜಿಲ್ಲಾ ಪೊಲೀಸ್ ಉಪಾಧೀಕ್ಷಕರಾದ ಸಿದ್ದೇಶ್ವರ ಹಾಗೂ ಸಿಪಿಐಗಳು ಮತ್ತು ವಿವಿಧ ಠಾಣೆಗಳ ಆರಕ್ಷಕ ನಿರೀಕ್ಷಕರು ಮತ್ತು ಇತರರು ಇದ್ದರು.