ದಾವಣಗೆರೆ. ಜೂ.೨೨; ಯೋಗದ ಗುರಿಯು ಕೇವಲ ದೇಹವನ್ನು ಸರಿಪಡಿಸುವುದು ಮಾತ್ರವಲ್ಲ. ಮನಸ್ಸು, ದೇಹ ಮತ್ತು ಆತ್ಮ ಸೇರಿದ ಎಲ್ಲ ಮೂರು ಅಂಶಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಇದು ನಾವು ಮತ್ತು ಪ್ರಕೃತಿ ಮಾತೆಯ ಜೊತೆ ಸಂರ್ಪಕವನ್ನು ಕಲ್ಪಿಸುತ್ತದೆ. ಇದು ನಮ್ಮನ್ನು ನಮ್ಮ ನೈಜತೆಯ ಹತ್ತಿರಕ್ಕೆ ಕೊಂಡೊಯ್ಯುತ್ತದೆ. ಯೋಗವು ವ್ಯಾಯಮ ಮಾತ್ರವಲ್ಲದೇ ನಿಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹವಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೇಯೆ ಪ್ರಕೃತಿ ಮತ್ತು ಮನುಷ್ಯನ ನಡೆವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಲು ಸಹಾಯ ಮಾಡುತ್ತದೆ.ಎಂದು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಯೋಗ ಪಟುಗಳಾದ ಭರಮಪ್ಪನವರು ರವರು ತಿಳಿಸಿದರು.ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ವಸತಿ ಶಾಲೆಯಲ್ಲಿ ನಡೆದ ೯ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಯೋಗಾಸನಗಳು, ಪ್ರಾಣಾಯಾಮ ಮತ್ತು ಷಟ್ ಕ್ರಿಯೆಗಳ ಮಹತ್ವವನ್ನು ಸಾರಿದರು.ವಿದ್ಯಾರ್ಥಿಗಳಿಂದ ಸೂರ್ಯ ನಮಸ್ಕಾರ, ಪ್ರಾಣಾಯಾಮ, ಶವಾಸನ, ಪದ್ಮಾಸನ, ಪಾದ ಹಸ್ತಾಸನ,ಸುಖಸನ, ನೌಕಾಸನ, ವಜ್ರಾಸನ ಹೀಗೆ ಹಲವು ಆಸನಗಳ ಪ್ರದರ್ಶನ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಯತೀಶ್ ಆಚಾರ್ ಹಾಗೂ ಶಿಕ್ಷಕ ವೃಂದದವರು ಮತ್ತು ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.