ಪೊಲೀಸ್ ಸಿಬ್ಬಂದಿಗಳಿಗೆ ಕೋವಿಡ್ ತಪಾಸಣೆ

ಗಂಗಾವತಿ ಏ 25 : ಕೊರೊನಾ 2ನೇ ಅಲೆ ವೇಗವಾಗಿ ಎಲ್ಲೆಡೆ ಹರಡುತ್ತಿರುವುದರಿಂದ ನಾವು ಕೊರೊನಾ ವಾರಿಯರ್ಸ್ ಗಳಾಗಿ ಮತ್ತೆ ಕೆಲಸ ನಿರ್ವಹಿಸಬೇಕಾಗಿದೆ ಎಂದು ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ನಗರದ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ನಡೆದ ಕೋವಿಡ್ ತಪಾಸಣೆಯಲ್ಲಿ ಪಾಲ್ಗೋಂಡು ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಈಗಾಗಲೇ ಸಾಕಷ್ಟು ಕೋವಿಡ್ ಬಗ್ಗೆ ಜಾಗೃತಿಯನ್ನು ಮೂಡಿಸಲಾಗಿದೆ. ಜೀವವಿದ್ದರೆ ಮುಂದೆ ಜೀವನ. ಹಾಗಾಗಿ ಮತ್ತೆ ಬಂದಿರುವ ಕೊರೊನಾ 2ನೇ ಅಲೆಯಿಂದ ಪಾರಾಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕನ್ನು ಧರಿಸಿಕೊಂಡು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು. ಅನಗತ್ಯವಾಗಿ ಹೊರಗಡೆ ಓಡಾಡದಂತೆ, ಪೌಷ್ಟಿಕ ಆಹಾರವನ್ನು ಸೇವಿಸಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಹೇಳಿದರು.
ನಂತರ ನಗರ, ಗ್ರಾಮೀಣಾ, ಸಂಚಾರಿ ಪೊಲೀಸ್ ಠಾಣೆಯ ಎಲ್ಲಾ ಸಿಬ್ಬಂದಿಗೆ ಕೋವಿಡ್ ತಪಾಸಣೆಯನ್ನು ಮಾಡಲಾಯಿತು.
ಈ ವೇಳೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಈಶ್ವರ ಸವಡಿ, ಗ್ರಾಮೀಣಾ ಸಿಪಿಐ ಉದಯ ರವಿ, ನಗರ ಠಾಣೆಯ ಪಿ.ಐ. ವೆಂಕಟಸ್ವಾಮಿ, ಗ್ರಾಮೀಣ ಠಾಣಾ ಪಿಎಸ್ಐ ದೊಡ್ಡಪ್ಪ ಜೆ, ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಪುಂಡಲಿಕಪ್ಪ ಜಾಧವ್ ಸೇರಿದಂತೆ ಸಿಬ್ಬಂದಿ ಇದ್ದರು.