
ಬೀದರ್:ಅ.22: ಮಂಗಲಪೇಟ್ ಬಡಾವಣೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಕವಾಯತು ಮೈದಾನದಲ್ಲಿ ನಿನ್ನೆ ಪೊಲೀಸ್ ಹುತಾತ್ಮ ದಿನ ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಖ್ಯಾತ ವೈದ್ಯರಾದ ಡಾ. ಚಂದ್ರಕಾಂತ ಗುದಗೆ ಅವರು ಹುತಾತ್ಮ ಪೊಲೀಸರಿಗೆ ಪುಷ್ಪ ನಮನ ಅರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದರು.
22 ವರ್ಷಗಳ ಕಾಲ ನಿರಂತರವಾಗಿ ಪೊಲೀಸ್ ಇಲಾಖೆಯಲ್ಲಿ ವೈದ್ಯಕೀಯ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಅವರು ಪ್ರತಿ ವರ್ಷ ಆಚರಿಸುವ ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವುದು ಗಮನಾರ್ಹ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್. ಎಲ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ, ಉಪ ಸಂರಕ್ಷಣಾಧಿಕಾರಿ ವಾನತಿ, ಹೆಚ್ಚುವರಿ ಎಸ್.ಪಿ ಮಹೇಶ ಮೇಘಣ್ಣನವರ್ ಸೇರಿದಂತೆ ಇತರೆ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.