ಪೊಲೀಸ ಧ್ವಜ ದಿನಾಚರಣೆ

ಗದಗ,ಏ3: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೆÇಲೀಸ್ ಇಲಾಖೆ ಪಾತ್ರ ಮಹತ್ವದ್ದಾಗಿದೆ ಎಂದು ನಿವೃತ್ತ ಪೆÇಲೀಸ ವರಿಷ್ಟಾಧಿಕಾರಿ ಟಿ. ಫೈಜುದ್ದೀನ್ ತಿಳಿಸಿದರು.

ಗದಗ ಜಿಲ್ಲಾ ಪೆÇಲೀಸ್ ಇಲಾಖೆಯಿಂದ ಜಿಲ್ಲಾ ಸಶಸ್ತ್ರ ಪೆÇಲೀಸ್ ಘಟಕ ಮಲ್ಲಸಮುದ್ರ-ಗದಗ ಮೈದಾನದಲ್ಲಿ ಪೆÇಲೀಸ್ ಧ್ವಜ ದಿನಾಚರಣೆ’ ನಿಮಿತ್ತ ಆಯೋಜಿಸಿದ್ದ ನಿವೃತ್ತರ ಸೇವಾ ಸಂಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿ ಅವರು ಮಾತನಾಡಿದರು.

ಇಲಾಖೆಯಲ್ಲಿ ಪ್ರತಿ ದಿನ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಎಲ್ಲ ನೌಕರರು ಮಾನಸಿಕ ಹಾಗೂ ದೈಹಿಕ ಸದೃಢವಾಗಿರುವುದು ಅವಶ್ಯಕವಾಗಿದೆ. ಅವರು ತಮ್ಮ ಸೇವಾ ನಿರತ ದಿನಗಳನ್ನು ಸ್ಮರಿಸಿಕೊಳ್ಳುತ್ತಾ ಪೆÇಲೀಸ ಇಲಾಖೆ ಹಾಗೂ ಮೇಲಾಧಿಕಾರಿಗಳಿಗೆ ಇನ್ನೂ ಹೆಚ್ಚಿನ ಗೌರವ ತರುವ ಕಾರ್ಯ ಮಾಡಬೇಕೆಂದು ತಿಳಿಸಿದರು.

ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಅವರು ಮಾತನಾಡಿ ಹಗಲು-ರಾತ್ರಿ ಎನ್ನದೇ ಕಾನೂನು ಸುವ್ಯವಸ್ಥೆ ಹಾಗೂ ಶಾಂತತೆ ಕಾಪಾಡಲು ಪೆÇಲೀಸ್ ಸಿಬ್ಬಂದಿಯವರು ಸದಾ ಕಾರ್ಯನಿರತರಾಗಿರುತ್ತಾರೆ. 1965 ರಿಂದ ಪೆÇಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದ್ದು, ಪ್ರಸಕ್ತ ವರ್ಷವೂ ಎಪ್ರಿಲ್ 02 ರಂದು ರಾಜ್ಯದ ಎಲ್ಲಾ ಪೆÇಲೀಸ್ ಘಟಕಗಳಲ್ಲಿ ಪೆÇಲೀಸ್ ಧ್ವಜ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪೆÇಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ನಿವೃತ್ತರಾದ ಅಧಿಕಾರಿ ಹಾಗೂ ಸಿಬ್ಬಂದಿಯವರನ್ನು ಈ ಸಮಯದಲ್ಲಿ ಸ್ಮರಿಸಿಕೊಳ್ಳಲು ಹಾಗೂ ನಿವೃತ್ತಿ ನಂತರ ಅವರಿಗೆ ಉತ್ತೇಜನ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಪ್ರತಿ ವರ್ಷ ಪೆÇಲೀಸ ಧ್ವಜ ದಿನಾಚರಣೆ ಸಂದರ್ಭದಲ್ಲಿ ಪೆÇಲೀಸ್ ಧ್ವಜಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಶೇಕಡಾ 50% ರಷ್ಟು ಹಣವನ್ನು ನಿವೃತ್ತ ಪೆÇಲೀಸ್ ಅಧಿಕಾರಿಗಳ ಕ್ಷೇಮ ನಿಧಿಗೆ ಮತ್ತು ಶೇಕಡಾ 50% ರಷ್ಟು ಹಣವನ್ನು ಕೇಂದ್ರ ನಿವೃತ್ತ ಪೆÇಲೀಸ್ ಕಲ್ಯಾಣ ನಿಧಿಗೆ ಜಮಾ ಮಾಡಿ ಈ ನಿಧಿಯನ್ನು ಸೇವೆಯಲ್ಲಿರುವ ಹಾಗೂ ನಿವೃತ್ತ ಪೆÇಲೀಸ್ ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ವೈದ್ಯಕೀಯ ಚಿಕಿತ್ಸಾ ವೆಚ್ಚ ಮಂಜೂರಿಸುವ ಸಲುವಾಗಿ ವಿನಿಯೋಗಿಸಲಾಗುತ್ತದೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಯ ನಿವೃತ್ತ ಪೆÇಲೀಸ್ ಅಧಿಕಾರಿಗಳ ಕ್ಷೇಮ ನಿಧಿ ಸಮಿತಿ ಸಭೆ ಕರೆದು ಸದರಿ ಸಭೆಗಳಲ್ಲಿ ನಿವೃತ್ತ ಪೆÇಲೀಸ್ ಅಧಿಕಾರಿಯವರ ಕುಂದುಕೊರತೆಗಳನ್ನು ಆಲಿಸಿ, ಕುಂದುಕೊರತೆ ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯವರು ಕ್ಯಾಂಟೀನ್ ಉಪಯೋಗ ಪಡೆಯುತ್ತಿದ್ದು, ಈ ಸದುಪಯೋಗವನ್ನು ನಿವೃತ್ತ ಪೆÇಲೀಸ್ ಅಧಿಕಾರಿಯವರುಗಳೂ ಸಹ ಪಡೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಪ್ರಸಕ್ತ ವರ್ಷನಿವೃತ್ತ ಪೆÇಲೀಸ್ ಅಧಿಕಾರಿಗಳ ಕ್ಷೇಮನಿಧಿಯಿಂದ 39 ಜನ ನಿವೃತ್ತ ಪೆÇಲೀಸ್ ಅಧಿಕಾರಿ/ಸಿಬ್ಬಂದಿಯವರಿಗೆ ರೂ.1,27,950=00ಗಳ ವೈದ್ಯಕೀಯ ಧನ ಸಹಾಯ ಪಾವತಿಸಲಾಗಿದೆ ಮತ್ತು ಮರಣ ಹೊಂದಿದ 22 ಜನ ನಿವೃತ್ತ ಪೆÇಲೀಸ್ ಅಧಿಕಾರಿಗಳ ಅಂತ್ಯಸಂಸ್ಕಾರಕ್ಕೆ ರೂ.2,20,000=00 ಧನ ಸಹಾಯ ನೀಡಿಲಾಗಿದೆ ಎಂದು ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ತಿಳಿಸಿದರು.

ಕಾರ್ಯಕ್ರಮದಲ್ಲಿ ಸೇವಾ ನಿವೃತ್ತರಿಗೆ ಗೌರವ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹೆಚ್ಚುವರಿ ಪೆÇಲೀಸ್ ವರಿಷ್ಟಾಧಿಕಾರಿಗಳಾದ ಎಂ.ಬಿ. ಸಂಕದ ,ಡಿಎಸ್ಪಿ ಡಿ.ಬಿ.ಇನಾಮದಾರ, ಸೇರಿದಂತೆ ಪೆÇಲೀಸ್ ಸಿಬ್ಬಂದಿ,ಗಣ್ಯರು ಹಾಜರಿದ್ದರು.
ಡಿ ಎಸ್ ಪಿ ಡಿ.ಎಸ್ ಧನಗರ ಅವರು ಸ್ವಾಗತಿಸಿದರು. ಡಿಎಸ್‍ಪಿ ಪ್ರಭುಗೌಡ ಕಿರೆದಳ್ಳಿ ವಂದಿಸಿದರು. ಎಂ ಟಿ ಭಟ್ ಕಾರ್ಯಕ್ರಮ ನಿರೂಪಿಸಿದರು.