ಪೊಳಲಿ ಹಾಗೂ ಪಣೋಲಿಬೈಲು ಕ್ಷೇತ್ರದ ಸಿ ಗ್ರೇಡ್ ಸಿಬಂದಿಗೆ ದಿನಸಿ ಸಾಮಾಗ್ರಿ ವಿತರಣೆ

ಬಂಟ್ವಾಳ , ಜೂ.೨- ಸರಕಾರವು ಅಸಂಘಟಿತ ಕಾರ್ಮಿಕರಿಗೆ ಈಗಾಗಲೇ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಉಳಿದಂತೆ ಅಶಕ್ತರಿಗೆ ಬೇರೆ ಬೇರೆ ಮೂಲಗಳಿಂದ ನೆರವು ನೀಡಲು ಪ್ರಯತ್ನಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಂಟ್ವಾಳದ ಪೊಳಲಿ ಹಾಗೂ ಪಣೋಲಿಬೈಲು ಕ್ಷೇತ್ರದಿಂದ ಒಟ್ಟು ೫೨ ಸಿ ಗ್ರೇಡ್ ದೇವಸ್ಥಾನದ ಸಿಬಂದಿಗೆ ದಿನಸಿ ಸಾಮಾಗ್ರಿ ವಿತರಿಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಎ ಗ್ರೇಡ್ ದೇವಸ್ಥಾನವಾದ ಪೊಳಲಿ ಕ್ಷೇತ್ರದಿಂದ ಬಂಟ್ವಾಳದ ೨೬ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬಂದಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.

ರಾಜ್ಯ ಧಾರ್ಮಿಕ ದತ್ತಿ ಪರಿಷತ್ತಿನ ಸದಸ್ಯ ಸೂರ್ಯನಾರಾಯಣ ಭಟ್ ಕಶೆಕೋಡಿ, ಜಿಲ್ಲಾ ಧಾರ್ಮಿಕ ದತ್ತಿ ಪರಿಷತ್ತಿನ ಸದಸ್ಯ ಗಿರಿಪ್ರಕಾಶ್ ತಂತ್ರಿ, ಪೊಳಲಿ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ಚೇರ ಸೂರ್ಯನಾರಾಯಣ ರಾವ್, ಪವಿತ್ರಪಾಣಿ ಪಿ.ಮಾಧವ ಭಟ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ, ಪೊಳಲಿ ಸಿಎ ಬ್ಯಾಂಕ್ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ವೆಂಕಟೇಶ್ ನಾವಡ, ಬಡಗಬೆಳ್ಳೂರು ಸಿಎ ಬ್ಯಾಂಕ್ ಅಧ್ಯಕ್ಷ ನಂದರಾಮ ರೈ, ವಾರ್ ರೂಮ್ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರು ಉಪಸ್ಥಿತರಿದ್ದರು.