ಪೋಕ್ಸೋ-ಮಕ್ಕಳ ಹಕ್ಕುಗಳ ಜಾಗೃತಿ ಮೂಡಿಸಿ

(ಸಂಜೆವಾಣಿ ವಾರ್ತೆ)
ಹಾವೇರಿ,ಜು8 : ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆ, ಪೆÇೀಕ್ಸೋ ಕಾಯ್ದೆ, ಬಾಲ್ಯ ವಿವಾಹ ತಡೆ ಜಾಗೃತಿ ಕುರಿತಂತೆ ಎಲ್ಲ ಶಾಲಾ-ಕಾಲೇಜ್ ಹಾಗೂ ವಸತಿ ನಿಲಯ, ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ವಾರ್ಡನಗಳಿಗೆ ಅರಿವು ಕಾರ್ಯಾಗಾರವನ್ನು ಆಯೋಜಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ್ ಅವರು ಸೂಚನೆ ನೀಡಿದರು.
ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾಗೀದಾರ ಇಲಾಖಾ ಮುಖ್ಯಸ್ಥರು ಹಾಗೂ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು, ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆಗಳನ್ನು ಹಾಗೂ ತಂಬಾಕು ರಹಿತ ಶಾಲೆ ಆವರಣ ಎಂಬ ನಾಮಫಲಕಗಳನ್ನು ಅಳವಡಿಸುವಂತೆ ಸಲಹೆ ನೀಡಿದರು.
ಬಾಲಕೀಯರ ವಿದ್ಯಾರ್ಥಿನಿಲಯ ಹಾಗೂ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಮಹಿಳಾ ವಾರ್ಡನಗಳ ನೇಮಕಮಾಡಬೇಕು. ಸಹ ಶಿಕ್ಷಣ ಇರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಸಮಸ್ಯೆ ನಿವಾರಣೆಗೆ ಮಹಿಳಾ ವಾರ್ಡನ್ ಹಾಗೂ ಶಿಕ್ಷಕಿಯರನ್ನು ನೋಡಲ್ ಅಧಿಕಾರಗಳನ್ನಾಗಿ ನೇಮಕಮಾಡುವುದು ಕಡ್ಡಾಯವಾಗಿದೆ ಎಂದು ಸೂಚನೆ ನೀಡಿದರು.
ಶಾಲೆಯಿಂದಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯ ವಾಹಿನಿಗೆ ತರುವ ಕೆಲವನ್ನು ಪರಿಣಾಮಕಾರಿಯಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ನಿರ್ವಹಿಸಬೇಕು. ಅಪಾಯಕಾರಿ ಅಥವಾ ಅಪಾಯಕಾರಿವಲ್ಲದ ಕೆಲಸಗಳಲ್ಲಿ ಕಾರ್ಮಿಕರಾಗಿ ನೇಮಕಮಾಡಿಕೊಳ್ಳುವ ಮಕ್ಕಳಿಗೆ ಪುನರ್ವಸತಿ ಕಲ್ಪಿಸಬೇಕು. ಈ ಮಕ್ಕಳನ್ನು ದುಡಿಮೆಗೆ ನೇಮಕಮಾಡಿಕೊಂಡ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳಾದ ಹಿರಿಯ ದಿವಾಣಿ ನ್ಯಾಯಾಧೀಶರಾದ ಪುಟ್ಟರಾಜು ಅವರು ಮಾತನಾಡಿ, ಪೆÇೀಕ್ಸೋ ಕಾಯ್ದೆಯಡಿ ಪರಿಹಾರ ಕ್ರಮಗಳು, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತಿ ಸೋಮವಾರ ಪೆನಲ್ ವಕೀಲರ ಸಿಟಿಂಗ್ ವ್ಯವಸ್ಥೆ ಮಾಡಲಾಗಿದೆ. ಪೆÇೀಕ್ಸೋ ಕಾಯ್ದೆಯ ಸಂತ್ರಸ್ತರಿಗೆ ಪರಿಹಾರ ವ್ಯವಸ್ಥೆ ಇದೆ. ಪೆÇೀಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತರ ಪಾಲಕರು ಯಾವುದೇ ಕಾರಣಕ್ಕೂ ರಾಜೀಯಾಗಬಾರದು. ಪ್ರಕರಣದ ಸಾಕ್ಷ್ಯಗಳು ಅಪರಾಧಿಗಳ ಆಮಿಷಕ್ಕೆ ಒಳಗಾಗಿ ರಾಜೀಮಾಡಿಕೊಂಡರೆ ಮುಂದೆ ಸಂತ್ರಸ್ತರಿಗೆ ಅನ್ಯಾಯವಾಗಲಿದೆ ಎಂದು ವಿವರಿಸಿದರು.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾಧಿಕಾರಿ ಪ್ರವೀಣ, ಕಾರ್ಮಿಕ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಕಲ್ಯಾಣಾಧಿಕಾರಿ ಹಾಗೂ ವಿವಿಧ ಸ್ವಯಂ ಸೇವಾ ಸಂಘಗಳು ಮಕ್ಕಳ ರಕ್ಷಣೆಗಾಗಿ ಜಿಲ್ಲೆಯಲ್ಲಿ ತಮ್ಮ ತಮ್ಮ ಇಲಾಖಾ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತಂತೆ ಮಾಹಿತಿ ನೀಡಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಡಿವೈಎಸ್‍ಪಿ ಶಿವಾನಂದ ಚಲವಾದಿ, ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ, ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷ ಎಸ್.ಎಚ್.ಮಜೀದ್ ಉಪಸ್ಥಿತರಿದ್ದರು.