ಪೋಷಕರು ಎರಡು ಡೋಸ್ ಲಸಿಕೆ ಪಡೆದರಷ್ಟೇ ಮಕ್ಕಳಿಗೆ ಶಾಲೆ ಪ್ರವೇಶ

ಬೆಂಗಳೂರು, ಡಿ.3- ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ,ನೇತೃತ್ವದಲ್ಲಿ ಮಹತ್ವದ ಸಭೆ ಇಂದು ನಡೆಯಿತು.
ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಸಭೆಯ ನಂತರ ಕಂದಾಯ ಸಚಿವ ಆರ್.ಅಶೋಕ್ ಸುದ್ದಿಗಾರರಿಗೆ ಮಾಹಿತಿ ನೀಡಿದರು.. ಸರ್ಕಾರ ಮಾಡಿಕೊಳ್ಳುತ್ತಿರುವ ಸಿದ್ಧತೆ ಮತ್ತು ಹೊಸ ನಿಯಮಾವಳಿಗಳ ಬಗ್ಗೆಯೂ ವಿವರಣೆ ನೀಡಿದಳ.
ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ ಸಮಾರಂಭಕ್ಕೆ ಅವಕಾಶವಿಲ್ಲ ಸಿನಿಮಾ ಹಾಲ್, ಮಾಲ್‌ನಲ್ಲಿ, ಶಾಲೆಗಳಲ್ಲಿ ಕೆಲಸ ಮಾಡುವವರು ಮತ್ತು ಮಕ್ಕಳ ಪೋಷಕರು 2 ಡೋಸ್ ಕಡ್ಡಾಯವಾಗಿ ಪಡೆದಿರಬೇಕು. ಮದುವೆಗಳಲ್ಲಿ 500ರೊಳಗೆ ಮಾತ್ರ ಜನ ಸೇರಬೇಕು. ಪ್ರತಿನಿತ್ಯ 1 ಲಕ್ಷ ಕೊವಿಡ್ ಟೆಸ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ 2ನೇ ಅಲೆ ವೇಳೆ ಸಿದ್ಧಗೊಂಡಿದ್ದ ಕೊವಿಡ್ ಬೆಡ್, ಐಸಿಯು ಬೆಡ್‌ಗಳನ್ನು ಮತ್ತೆ ಸಿದ್ಧಪಡಿಸಲು ಸೂಚಿಸಲಾಗಿದೆ. ಆಕ್ಸಿಜನ್ ಪ್ಲ್ಯಾಂಟ್ ಸಿದ್ಧಪಡಿಸಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಕಂಟ್ರೋಲ್ ರೂಂ ಆರಂಭಿಸಲಾಗುವುದು. ಅದಕ್ಕೆ ಬೇಕಾದ ಸಿಬ್ಬಂದಿ ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು. ಅಗತ್ಯ ಔಷಧಿಗಳನ್ನು ಮುಂಚಿತವಾಗಿಯೇ ಖರೀದಿಸುವಂತೆ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಕೋವಿಡ್ ಉಸ್ತುವಾರಿಗಾಗಿ ಶಿಲ್ಪಾ ನಾಗರಾಜ್ ಅವರನ್ನು ಸರ್ವೆಲೈನ್ಸ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕೋವಿಡ್ ಪರೀಕ್ಷೆಗೆ ₹ 500 ದರ ನಿಗದಿ ಮಾಡಲಾಗಿದೆ. ಅಬೇಟ್‌ ಪರೀಕ್ಷೆಗೆ3 ಸಾವಿರ ರೂ ನಿಗದಿ ಮಾಡಲಾಗಿದೆ. .

ವಿಮಾನ ನಿಲ್ದಾಣದಲ್ಲೂ ಕಟ್ಟುನಿಟ್ಟಾಗಿ ಕೋವಿಡ್ ಪರೀಕ್ಷೆ ನಡೆಸಲಾಗುವುದು. ನೆಗೆಟಿವ್ ವರದಿ ಬಂದ ನಂತರ ಏರ್‌ಪೋರ್ಟ್‌ನಿಂದ ಹೊರಕ್ಕೆ ಕಳಿಸಲಾಗುವುದು. ಬೆಳಗಾವಿ ಸುವರ್ಣಸೌಧದಲ್ಲಿಯೇ ಅಧಿವೇಶನ ನಡೆಯುತ್ತದೆ ಅಶೋಕ್ ಸ್ಪಷ್ಟಪಡಿಸಿದರು.

ವಿಧಾನ ಮಂಡಲದ ಚಳಿಗಾಲದ ಅಧಿವೇಶನಕ್ಕೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲು ಸೂಚನೆ ನೀಡಿದರು. ಕಟ್ಟುನಿಟ್ಟಿನ ನಿಯಮಗಳ ನಡುವೆ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ. ಒಮಿಕ್ರಾನ್ ಬಗ್ಗೆ ತಜ್ಞರಿಂದ ಬೊಮ್ಮಾಯಿ ಮಾಹಿತಿ ಸಂಗ್ರಹಿಸಿದರು.

ಸಭೆಯಲ್ಲಿ ಸಚಿವರಾದ ಡಾ.ಕೆ.ಸುಧಾಕರ್, ಗೋವಿಂದ ಕಾರಜೋಳ, ಡಾ.ಅಶ್ವತ್ಥ್ ನಾರಾಯಣ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ತಜ್ಞ ವೈದ್ಯರಾದ ಡಾ.ಎಂ.ಕೆ.ಸುದರ್ಶನ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.