
ಔರಾದ :ಜು.7: ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗಳಿಗೆ ಪೌಷ್ಟಿಕ ಆಹಾರಗಳು ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರಗಳನ್ನು ನೀಡುವುದರೊಂದಿಗೆ ಅದರ ಮಹತ್ವ ಕುರಿತು ಅರಿವು ಮೂಡಿಸಬೇಕಿದೆ ಎಂದು
ಮಹೇಶ ಕನಜೆ ಹೇಳಿದರು.
ತಾಲೂಕಿನ ಬೆಡಕುಂದಾ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ರಿಲಯನ್ಸ್ ಫೌಂಡೇಶನ್ ಬೀದರ, ಔಟರಿಚ ಸಂಸ್ಥೆ ಬೀದರ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಪೆÇೀಷಣೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ರಾಜೆಂದ್ರ ಮಾಳೆ ಮಾತನಾಡುತ್ತಾ ಹಿಂದೆ ಸಿರಿಧಾನ್ಯಗಳು, ತರಕಾರಿಗಳನ್ನು ಹೆಚ್ಚಾಗಿ ಬಳಸುವ ಮೂಲಕ ನಮ್ಮ ಹಿರಿಯರು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡಿದ್ದರು. ಹಳ್ಳಿಗಳಲ್ಲಿ ಅಕ್ಕಿಯನ್ನು ನೋಡುತ್ತಿದ್ದುದೇ ಅಪರೂಪವಾಗಿತ್ತು. ಆದರೆ ಈಗ ಅಕ್ಕಿ, ಸಕ್ಕರೆ ಮೊದಲಾದ ಪದಾರ್ಥಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ,
ಗರ್ಭಿಣಿಯರು ಧನಾತ್ಮಕವಾಗಿ, ಉತ್ತಮ ಆಲೋಚನೆ ಹೊಂದಬೇಕು. ಶಾಂತತೆಯಿಂದ ಧ್ಯಾನ, ಶ್ಲೋಕಗಳನ್ನು ಹೇಳಿ???ಂಡಲ್ಲಿ ಜನಿಸುವ ಮಗುವಿನ ಮಾನಸಿಕ ಆರೋಗ್ಯ ಉತ್ತಮವಾಗಿರಲಿದೆ. ತಾಯಿಯ ಮನಸ್ಸು ಚಿಂತೆ, ದುಗುಡ, ದುಃಖ, ಹಿಂಸೆಯಿಂದ ಕೂಡಿದ್ದರೆ ಮಗುವಿನ ಮನಸ್ಥಿತಿಯೂ ಹಾಗೇ ಇರುತ್ತದೆ. ಆದ್ದರಿಂದ ಗರ್ಭಾವಸ್ಥೆಯಲ್ಲಿರುವಾಗ ತಾಯಂದಿರ ವಿಚಾರಧಾರೆ ಉತ್ತಮವಾಗಿರಬೇಕು ಎಂದು ಸಲಹೆ ನೀಡಿದರು.
ಕುಶನೂರ ಆರೋಗ್ಯ ನಿರೀಕ್ಷಣಾ ಅಧಿಕಾರಿ ಶರಣು ಪಾಟೀಲ ಅವರು ಮಾತನಾಡಿ ಮಕ್ಕಳು ತರಕಾರಿಗಳನ್ನು ತೆಗೆದಿಟ್ಟು ಊಟ ಮಾಡುತ್ತಿರುವ ಬೆಳವಣಿಗೆ ಹೆಚ್ಚಾಗುತ್ತಿದೆ. ಸಜ್ಜೆ, ನವಣೆ, ರಾಗಿ, ಅರ್ಕ ಮೊದಲಾದ ಧಾನ್ಯಗಳ ಬಳಕೆ ಹೆಚ್ಚಾಗಬೇಕಿದೆ. ಮಕ್ಕಳು ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದೆ, ಮಕ್ಕಳು ಪೌಷ್ಟಿಕಾಂಶ ಆಹಾರಗಳನ್ನು ಸೇವಿಸಬೇಕು. ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡಬಾರದು, ಮಾನಸಿಕ ಆರೋಗ್ಯದ ಕಡೆಗೂ ಅತಿ ಹೆಚ್ಚಿನ ಗಮನ ಹರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೊರೆಕಲ್ ಗ್ರಾ.ಪಂ ಅಧ್ಯಕ್ಷ ಧನರಾಜ ಬಾವಗೆ, ಬಾಬುರಾವ ರಂಡ್ಯಾಳೆ, ಪ್ರಾ.ಆರೋಗ್ಯ ಸುರಕ್ಷಾ ಅಧಿಕಾರಿ ಅರ್ಚನಾ ಗೌಳಿ ,ಪಾರ್ವತಿ, ಅಂಗನವಾಡಿ ಕಾರ್ಯಕರ್ತೆ ಸೌಂದರ್ಯ, ಶೋಭಾ, ಆಶಾ ಕಾರ್ಯಕರ್ತೆ ಬೇಬಾವತಿ, ಎಲ್.ಸಿ.ಆರ್ .ಪಿ. ಶಿಲ್ಪಾ ಮುದ್ದಾ, ಸೇರಿದಂತೆ ಶಾಲಾ ಮುಖ್ಯ ಗುರುಗಳು ಭಾಗವಹಿಸಿದರು.