ಪೋಷಣೆ ರಕ್ಷಣೆಯ ಅಗತ್ಯವಿರುವ ಮಕ್ಕಳ ನೆರವಿಗಾಗಿ ಚೈಲ್ಡ್‍ಲೈನ್ 1098 ಗೆ ಕರೆ ಮಾಡಿಃ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್

ವಿಜಯಪುರ, ಸೆ.25- ಜಿಲ್ಲೆಯಲ್ಲಿ ಕಳೆದು ಹೋದ ಮಕ್ಕಳು, ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಓಡಿಹೋದ ಮಕ್ಕಳು, ವೈದ್ಯಕೀಯ ನೆರವು ಅಗತ್ಯವಿರುವ ಮಕ್ಕಳು, ಪೆÇೀಷಣೆ ಮತ್ತು ರಕ್ಷಣೆಯ ಅಗತ್ಯವಿರುವ ಮಕ್ಕಳ ನೆರವಿಗಾಗಿ ಚೈಲ್ಡ್ ಲೈನ್ 1098 ಕ್ಕೆ ಕರೆ ಮಾಡಿ ಚೈಲ್ಡ್ ಹೆಲ್ಪ್ ಲೈನ್ ತಂಡವು 60 ನಿಮಿಷದೊಳಗಾಗಿ ಮಗುವಿನ ನೆರವಿಗಾಗಿ ಬರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ್ ಅವರು ಹೇಳಿದರು.
ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಚೈಲ್ಡ್ ಲೈನ್ ಇಂಡಿಯಾ ಫೌಂಡೆಷನ್, ಚೆನೈ, ಹಾಗೂ ಉಜ್ವಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ, ವಿಜಯಪುರ ಇವರುಗಳ ಸಂಯುಕ್ತಾಶ್ರಯದಲ್ಲಿ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ, ಚೈಲ್ಡ್ ಲೈನ್ 1098 ಹೆಲ್ಪ್ ಡೆಸ್ಕ್- ಉದ್ಘಾಟಿಸಿ ಅವರು ಮಾತನಾಡಿದರು.
ಅದರಂತೆ ಬಾಲ್ಯ ವಿವಾಹದ ಬಗ್ಗೆ ಸಾರ್ವಜನಿಕರು ದೂರು ನೀಡಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಆ ಸ್ಥಳಕ್ಕೆ ಭೇಟಿ ನೀಡಿ ಬಾಲ್ಯವಿವಾಹವನ್ನು ತಡೆದು ಬಾಲ್ಯವಿವಾಹ ಮಾಡುವವರ ವಿರುದ್ಧ ಕಠಿಣ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಬಾಲ್ಯ ವಿವಾಹದ ಬಗ್ಗೆ ಅಧಿಕಾರಿಗಳು ಪಟ್ಟಣದಲ್ಲಿ ಹಾಗೂ ಹಳ್ಳಿಗಳಲ್ಲಿ ಜಾಗೃತಿಯನ್ನು ಮೂಡಿಸುವಂಥ ಕೆಲಸಗಳನ್ನು ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಪೆÇಲೀಸ್ ವರಿಷ್ಠಾಧಿಕಾರಿಗಳಾದ ಆನಂದ್ ಕುಮಾರ್ ಅವರು ಮಾತನಾಡಿ ಮಕ್ಕಳ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಅನಾಥ ಮಕ್ಕಳು ಕಂಡುಬಂದಲ್ಲಿ ಚೈಲ್ಡ್ ಹೆಲ್ಪ್‍ಲೈನ್ 1098 ಗೆ ಕರೆ ಮಾಡಬೇಕು ಎಂದು ತಿಳಿಸಿದರು.
ಶಾಲೆಗಳಲ್ಲಿ ಶಿಕ್ಷಕರು ಬಾಲ್ಯ ವಿವಾಹದ ಬಗ್ಗೆ ತಿಳಿಹೇಳಬೇಕು ಹಾಗೂ ಪಾಲಕರು ಕೂಡ ಮನೆಗಳಲ್ಲಿ ಮಕ್ಕಳಿಗೆ ನೈತಿಕತೆಯ ಬಗ್ಗೆ ತಿಳಿಹೇಳಬೇಕು ಎಂದು ತಿಳಿಸಿದರು, ಪೆÇಲೀಸ್ ಇಲಾಖೆಯು ಸಂಪೂರ್ಣವಾಗಿ ಮಕ್ಕಳ ಸಮಸ್ಯೆಗೆ ಬೆಂಬಲ ನೀಡುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಕೆ,ಕೆ ಚವ್ಹಾನ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಶ್ರೀಧರ್ ಕುಲಕರ್ಣಿ, ಉಜ್ಜಲ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ನಿರ್ದೇಶಕರು ವಾಸುದೇವ ತೋಳಬಂದಿ ,ರಾಜ್ಯ ಯೋಜನಾ ಮುಖ್ಯಸ್ಥರು ಚೈಲ್ಡ್ ಲೈನ್ ಇಂಡಿಯಾ ಫೌಂಡೇಶನ್ ಚೆನ್ನೈ ಚಿತ್ರಾ ಅಂಚನ್, ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.