ಪೋಷಣ್ ಅಭಿಯಾನ ದೇಶದಲ್ಲಿ ರಾಜ್ಯ ಮೊದಲ ಸ್ಥಾನ ಜೊಲ್ಲೆ ಗುರಿ

ಬೆಂಗಳೂರುಮಾ೨೫- ರಾಷ್ಟ್ರೀಯ ಪೋಷಣ್ ಅಭಿಯಾನದ ಅನುದಾನದ ಬಳಕೆ ಹಾಗೂ ಸಾಧನೆಯಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ.ಮೊದಲ ಸ್ಥಾನಕ್ಕೆ ತರಲು ಶ್ರಮಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಗುರಿ ನಿಗದಿಪಡಿಸಿದ್ದಾರೆ

ಮುಂದಿನ ತ್ರೈಮಾಸಿಕ ಸಭೆಯ ವೇಳೆಗೆ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ.

ಪೋಷಣ್ ಅಭಿಯಾನದ ಪ್ರಗತಿ ಪರಿಶೀಲನೆ ಕುರಿತಂತೆ ಬಹುಮಹಡಿ ಕಟ್ಟಡದ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅವರು ಮಾತನಾಡಿದರು

ಪೋಷಣ್ ಅಭಿಯಾನದ ಕುರಿತಂತೆ ಪ್ರತಿಯೊಂದು ಜಿಲ್ಲೆಗಳ ಉಪನಿರ್ದೇಶಕರ ಜೊತೆಗೆ ಮಾತನಾಡಿ ಚಟುವಟಿಕೆಗಳ ಭೌತಿಕ ಹಾಗೂ ಆರ್ಥಿಕ ಮಾಹಿತಿ ಪಡೆದರು, ಅಲ್ಲದೆ ಅಭಿಯಾನದ ಜಾರಿಗೆ ಇರುವ ಸಮಸ್ಯೆಗಳ ಕುರಿತಂತೆಯೂ ಮಾಹಿತಿ ಪಡೆದು ದೇಶದಲ್ಲೇ ರಾಜ್ಯ ಮೊದಲ ಸ್ಥಾನಕ್ಕೆ ಬರಲು ಎಲ್ಲರೂ ಶ್ರಮಿಸಬೇಕು ಎಂದು ಸೂಚನೆ ನೀಡಿದ್ದಾರೆ

ಪೋಷನ್ ಟ್ರ್ಯಾಕರ್ ಅಳವಡಿಕೆ, ಸಮುದಾಯ ಆಧಾರಿತ ಕಾರ್ಯಕ್ರಮಗಳು, ಐಎಲ್‌ಎ ತರಬೇತಿ ಕಾರ್ಯಕ್ರಮ, ಇ-ಐಎಲ್‌ಎ ಪ್ರಗತಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ನೀಡಿರುವ ಸ್ಮಾರ್ಟ್ ಫೋನ್ ಸಮಸ್ಯೆ ಕುರಿತು ಸಮಸ್ಯೆಯನ್ನು ಲಿಖಿತ ರೂಪದಲ್ಲಿ ಆಯುಕ್ತರಿಗೆ ಸಲ್ಲಿಸುವಂತೆ ಸೂಚಿಸಿದರು ಅಲ್ಲದೆ, ಸಂಬಂಧಪಟ್ಟ ಕಂಪನಿಗಳ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಇದೇ ವೇಳೆ ಅಭಿಯಾನದ ಜಾರಿಯಲ್ಲಿ ಎರಡನೇ ಸ್ಥಾನದಲ್ಲಿರುವುದಕ್ಕೆ ಅಧಿಕಾರಿಗಳ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರುಸರ್ಕಾರದ ಯೋಜನೆ ಜಾರಿಯಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರು ರಾಷ್ಟ್ರೀಯ ಪೋಷನ್ ಅಭಿಯಾನದ ಕುರಿತು ಆಯಾ ಕಚೇರಿಗಳಲ್ಲಿ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿದರು.