ಪೋಸ್ಟರ್ ಅಂಟಿಸುವವರ ವಿರುಧ್ದ ಕ್ರಮಕ್ಕೆ ಸೂಚನೆ

ಚಿಕ್ಕಬಳ್ಳಾಪುರ.ಮಾ೧೭: ೩ಸಕ್ಷಮ ಪ್ರಾಧಿಕಾರದಿಂದ ಪರವಾನಗಿ ಪಡೆಯದೆ ಯಾವುದೇ ರಾಜಕೀಯ ಪಕ್ಷಗಳು ಬ್ಯಾನರ್ ಮತ್ತು ಪೂಸ್ಟರ್ ಗಳನ್ನು ಅಂಟಿಸುವುದು ಕಂಡುಬಂದರೆ ಅವುಗಳನ್ನು ಅಂಟಿಸಿದವರು ಹಾಗೂ ಅವರಿಗೆ ಬೆಂಬಲಕ್ಕೆ ನಿಂತಿರುವವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರು ಮಂಗಳವಾರ ಬೆಂಗಳೂರಿಂದ ನಡೆಸಿದ ವಿಡಿಯೋ ಸಂ ವಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳು ಭಾಗವಹಿಸಿ ಅವರಿಂದ ನಿರ್ದೇಶನಗಳನ್ನು ಪಡೆದ ನಂತರ ಜಿಲ್ಲಾಧಿಕಾರಿ ಕಚೇರಿ ಸಭಾ ಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕಡಕ್ ಸೂಚನೆಗಳನ್ನುನೀಡಿದರು. ಸದ್ಯಕ್ಕೆ ಮಾದರಿ ನೀತಿ ಸಂಹಿತೆ ಜಾರಿಯಾಗಿಲ್ಲ. ಆದರೆ ಚಾಲ್ತಿಯಲ್ಲಿರುವ ಜನಪ್ರತಿನಿಧಿ ಕಾಯ್ದೆ ಮತ್ತು ಮೋಟಾರ್ ವೆಹಿಕಲ್ ಕಾಯ್ದೆ ಹಾಗೂ ಇನ್ನಿತರ ಕಾಯ್ದೆ, ಕಾನೂನುಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿ ಮಾಡಬೇಕು.
ಜಿಲ್ಲೆಯಲ್ಲಿರುವ ನಗರಸಭೆ, ಪು ರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳಿಂದ ಸೂಕ್ತ ಪರವಾನಗಿ ಪಡೆಯದೆ ಸಾರ್ವಜಕ ಸ್ಥಳಗಳಲ್ಲಿ ಪೋಸ್ಟರ್ ಗಳು, ಬ್ಯಾನರ್‌ಗಳು ಹಾಗೂ ಇನ್ನಿತರ ಪ್ರಚಾರ ಸಾಮಗ್ರಿಗಳನ್ನು ಅಳವಡಿ ಸುವಂತಿಲ್ಲ. ಈ ರೀತಿಯ ಅನಧಿಕೃತ ಪ್ರಚಾರ ಸಾಮಗ್ರಿಗಳು ತಮ್ಮ ವ್ಯಾಪ್ತಿಯಲ್ಲಿ ಕಂಡುಬಂದರೆ ತಕ್ಷಣವೇ ತೆರವುಗೊಳಿಸಿ ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದರು. ಯಾವುದೇ ರ್ದಿಷ್ಟ ವ್ಯಕ್ತಿಯ ಭಾವಚಿತ್ರ ಅಥವಾ ಪಕ್ಷದ ಚಿಹ್ನೆ ಹೊಂದಿರುವಂತಹ, ಉಡುಗೊರೆಗಳ ವಿತರಣೆ, ಸಾಗಾಣಿಕೆ ಹಾಗೂ ದಾಸ್ತಾನು ಕಂಡುಬಂದರೆ ಅವುಗಳನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಬೇಕು. ಮತದಾರರಿಗೆ ಆಮಿಷವೊಡ್ಡುವಂತಹ ಉಡುಗೊರೆ ಹಾಗೂ ಸಾಮೂಹಿಕ ಊಟದ ವ್ಯವಸ್ಥೆ ಮಾಡುವು ದನ್ನು ಕಡ್ಡಾಯವಾಗಿ ನಿರ್ಬಂಧಿಸಕು.
ಈ ನಿಟ್ಟಿನಲ್ಲಿ ಹೆಚ್ಚು ಗಾವಹಿ ಸಲು ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಮುಖ್ಯಸ್ಥರಿಗೆ ಜಿಲ್ಲಾಧಿ ಕಾರಿಗಳು ಸೂಚನೆಗಳನ್ನು ನೀಡಿದರು. ವಿಡಿಯೋ ಸಂವಾದ ಸಭೆಯಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ. ಟ್ಟಾಲಿ, ಜಿಲ್ಲಾ ಪೊಲೀ ಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಎಡಿಸಿ ಡಾಎನ್.ತಿಪ್ಪೇಸ್ವಾಮಿ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.