ಪೋಸ್ಟರ್ ಬಿಡುಗಡೆ

ಬೀದರ್: ಜು.20:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ದಾವಣಗೆರೆಯಲ್ಲಿ ಆಗಸ್ಟ್ 3 ರಂದು ಹಮ್ಮಿಕೊಂಡಿರುವ ಅಮೃತ ಮಹೋತ್ಸವ ಅಂಗವಾಗಿ ಬೀದರ್ ಜಿಲ್ಲಾ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಮಿತಿಯಿಂದ ಹೊರ ತರಲಾದ ಬೆಂಗಳೂರು ಚಲೋ ಪೋಸ್ಟರ್ ಅನ್ನು ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಶಾಸಕ ರಹೀಂಖಾನ್, ಸಮಿತಿಯ ಗೌರವಾಧ್ಯಕ್ಷ ಅಬ್ದುಲ್ ಮನ್ನಾನ್ ಸೇಠ್, ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ, ಸಂಚಾಲಕ ಬಸವರಾಜ ಮಾಳಗೆ ಇದ್ದರು