ಪೌರಕಾರ್ಮಿಕರಿಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನದ ಜಾಗೃತಿ


 ಸಂಜೆವಾಣಿ ವಾರ್ತೆ
 ಹಗರಿಬೊಮ್ಮನಹಳ್ಳಿ. ಜು.17 ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರಿಗೆ ಕಸ ವಿಂಗಡಣೆ , ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿರುವ ಬಗ್ಗೆ ಪೌರಕಾರ್ಮಿಕರಿಗೆ ಅರಿವು ಮೂಡಿಸಲಾಯಿತು
 ಪುರಸಭೆಯ  ಪೌರ ಕಾರ್ಮಿಕರಿಗೆ ಪ್ಲಾಸ್ಟಿಕ್ ಮುಕ್ತ ಅಭಿಯಾನದ ತರಬೇತಿ  ಬಳಕೆ ಪ್ಲಾಸ್ಟಿಕ್ ಗುರುತಿಸುವಿಕೆ ಹಾಗೂ ಅದರಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಪುರಸಭೆಯ ಮುಖ್ಯಾಧಿಕಾರಿ ಪ್ರಭಾಕರ್ ಮಾತನಾಡಿ ಸರ್ಕಾರ ಪ್ಲಾಸ್ಟಿಕ್ ನಿಷೇಧ ಕಾನೂನು ಜಾರಿಗೆ ತಂದರು ಅಂಗಡಿ ಮತ್ತು ಮುಗ್ಗಟ್ಟುಗಳಲ್ಲಿ ಅತಿ ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದಾರೆ  ಇದರಿಂದ ಪರಿಸರಕ್ಕೆ ತೊಂದರೆಯಾಗುತ್ತದೆ. ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ನ್ನು ಗುರುತಿಸಿ ಅಂತಹ ವಸ್ತುಗಳನ್ನು ವಶಪಡಿಸಿಕೊಳ್ಳುವ ಮೂಲಕ  ಮಾಲೀಕರಿಗೆ ಎಚ್ಚರಿಕೆ ನೀಡುವ ಜೊತೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಹೇಳಬೇಕು ಎಂದರು.  .
 ಈ ಸಂದರ್ಭದಲ್ಲಿ ಪುರಸಭೆಯ ವ್ಯವಸ್ಥಾಪಕ ಚಂದ್ರಶೇಖರ್ ಕಿರಿಯ ಆರೋಗ್ಯ ಸಹಾಯಕಿಯರಾದ ನಾಗರತ್ನ, ವಿಜಯಲಕ್ಷ್ಮಿ,ಹಾಗೂ  ಪೌರಕಾರ್ಮಿಕರು   ಹಾಜರಿದ್ದರು.