ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಕ್ರಮವಹಿಸಿ

????????????????????????????????????

ದಾವಣಗೆರೆ ಸೆ.೧೭; ಅಭಿವೃದ್ಧಿ ದೃಷ್ಟಿಕೋನದಿಂದ ನಗರ ಸ್ವಚ್ಛ ಮಾಡುವ ಪಾಲಿಕೆಯ ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮಹಾನಗರಪಾಲಿಕೆ ಮಹಾಪೌರರು ಬಿ.ಜಿ.ಅಜಯ್ ಕುಮಾರ್ ಹೇಳಿದರು.
ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ೪೫ ವಾರ್ಡ್ಗಳಲ್ಲೂ ಸಹ ಬೆಳಿಗ್ಗೆ ೬ ರಿಂದ ೧೧ ರವೆರೆಗೆ ಹಾಗೂ ಮಧ್ಯಾಹ್ನ ೨ ರಿಂದ ೫ ರವರೆಗೆ ಕೆಲಸ ನಿರ್ವಹಿಸಲು ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆಯ ವಿರೋಧ ಪಕ್ಷದ ನಾಯಕ ಎ.ನಾಗರಾಜ ಮಾತನಾಡಿ, ಭೌಗೋಳಿಕವಾಗಿ ಹೆಚ್ಚುವರಿ ಪೌರಕಾರ್ಮಿಕರ ಹುದ್ದೆ ತುಂಬಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈಗಾಗಲೇ ೩೧೭ ಖಾಯಂ ಹಾಗೂ ೨೦೦ ಗುತ್ತಿಗೆ ಪೌರ ಕಾರ್ಮಿಕರಿದ್ದಾರೆ. ಮೊದಲು ಇವರಿಂದ ಸರಿಯಾಗಿ ಕೆಲಸ ಮಾಡಿಸಿ ಬಳಿಕ ತೀರ್ಮಾನ ಕೈಗೊಂಡು ಹೊಸದಾಗಿ ಪ್ರಸ್ತಾವನೆ ಸಲ್ಲಿಸಿ ಎಂದು ತಿಳಿಸಿದರು.
ಪಾಲಿಕೆ ಸದಸ್ಯರಾದ ಉದಯ್ ಮಾತನಾಡಿ, ಪೌರಕಾರ್ಮಿಕರು ಸರಿಯಗಿ ಕೆಲಸ ನಿರ್ವಹಿಸುತ್ತಿಲ್ಲ. ಸ್ವಚ್ಛತೆ ಬಗ್ಗೆ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಪೂರ್ತಿ ಪ್ರಮಾಣದಲ್ಲಿ ಪೌರ ಕಾರ್ಮಿಕರ ಕೆಲಸ ತೆಗೆದುಕೊಳ್ಳಿ. ಜೊತೆಗೆ ಹೊರ ಗುತ್ತಿಗೆಯ ದಫೇದಾರ್ ಅವರನ್ನು ಪೌರಕಾರ್ಮಿಕರನ್ನಾಗಿಸಿ ಕೆಲಸಕ್ಕೆ ನೇಮಿಸಿ ಎಂದರು.
ಪೌರಕಾರ್ಮಿಕರ ವಜಾ ಶತಸಿದ್ಧ: ಇದಕ್ಕೆ ಮೇಯರ್ ಪ್ರತಿಕ್ರಿಯಿಸಿ, ಪೌರಕಾರ್ಮಿಕರು ಕೆಲಸಕ್ಕೆ ಬಾರದೆ ಸಂಬಳ ತೆಗೆದುಕೊಳ್ಳುತ್ತಿರುವ ಹಾಗೂ ಧಮ್ಕಿ ಹಾಕಿ ಹಾಜರಿ ಹಾಕಿಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ತರಹದ ಬೆಳವಣ ಗೆಗಳು ಮುಂದಿನ ದಿನಗಳಲ್ಲಿ ಕಂಡು ಬಂದರೆ ವಜಾ ಮಾಡುವುದು ಶತಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ನಗರವನ್ನು ಸ್ವಚ್ಛವಾಗಿಡಲು ಪೌರ ಕಾರ್ಮಿಕರಿಗೆ ಸಮಯ ನಿಗದಿ ಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಮೈಸೂರು ಜಿಲ್ಲೆಯಂತೆ ದಾವಣಗೆರೆ ಜಿಲ್ಲೆಯನ್ನು ನಂಬರ್ ಒನ್ ಸ್ವಚ್ಛನಗರವಾಗಿಸಲು ಎಲ್ಲರೂ ಸಹಕರಿಸಬೇಕು ಎಂದ ಅವರು, ಮುಂದಿನ ದಿನಗಳಲ್ಲಿ ನಗರದ ಸ್ವಚ್ಛತೆಯ ಸಲುವಾಗಿ ವಿಶೇಷ ಸಭೆ ನಡೆಸೋಣ ಎಂದು ತಿಳಿಸಿದರು.
ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ ಮಾತನಾಡಿ, ಪೌರ ಕಾರ್ಮಿಕರಿಗಾಗಿ ಬಯೋಮೆಟ್ರಿಕ್ ಅಳವಡಿಸಲಾಗಿದೆ. ದಫೇದಾರ್ ಆಗಿರುವವರನ್ನು ಪೌರ ಕಾರ್ಮಿಕರನ್ನಾಗಿ ಕೆಲಸ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಮಹಾನಗರಪಾಲಿಕೆ ಸದಸ್ಯ ಲತೀಫ್ ಮಾತನಾಡಿ, ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಪಾಲಿಕೆ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದರು. ಈ ವೇಳೆ ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ, ಈ ವಿಷಯವನ್ನು ತುಂಬಾ ಗಂಭೀರವಾಗಿ ತೆಗೆದುಕೊಂಡು ಚರ್ಚೆ ನಡೆಸೋಣ ಎಂದರು.
ಮಳಿಗೆ ಮರು ಹರಾಜಿಗೆ ಸೂಚನೆ: ಮೇಯರ್ ಮಾತನಾಡಿ, ಸರ್ಕಾರದ ನಿಯಮದಂತೆ ಅವಧಿ ಮುಗಿದಿರುವ ಮಳಿಗೆಗಳನ್ನು ಹಾಗು ಸುಸ್ಥಿತಿಯಲ್ಲಿರುವ ಮತ್ತು ದುರಸ್ತಿಯಲ್ಲಿರುವ ಮಳಿಗೆಗಳನ್ನು ಅಭಿವೃದ್ಧಿಗೊಳಿಸಿ ಮರು ಹರಾಜು ಮಾಡಲು ಸೂಚಿಸಿದರು. ಈ ವೇಳೆ ಸದಸ್ಯ ನಾಗರಾಜ್ ಮಾತನಾಡಿ, ಸುಮಾರು ೨೦ ವರ್ಷದಿಂದ ಮಳಿಗೆಗಳ ಮೂಲಕ ಜೀವನ ಸಾಗಿಸಿಕೊಂಡು ಬಂದಿದ್ದಾರೆ. ಮರು ಹÀರಾಜು ಮಾಡುವ ಮೂಲಕ ಗೊಂದಲ ಸೃಷ್ಟಿಸೋದು ಬೇಡ. ಅವರಿಗೆ ಪುನಃ ಅವಕಾಶ ನೀಡೋಣ. ಆದರೆ ಬಾಡಿಗೆ ಕಟ್ಟದವರ ಬಗ್ಗೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿ ಎಂದರು.
ಶೇ. ೨೦ ರಷ್ಟು ಬಾಡಿಗೆ ವಸೂಲಿ: ಈ ವೇಳೆ ಸದಸ್ಯ ಪ್ರಸನ್ನ ಕುಮಾರ್ ಮಾತನಾಡಿ, ೨೦೧೯-೨೦ ನೇ ಸಾಲಿನಲ್ಲಿ ಕೇವಲ ಶೇ. ೨೦ ರಷ್ಟು ಬಾಡಿಗೆ ವಸೂಲಿಯಾಗಿದೆ. ೨.೧೪ ಕೋಟಿ ಬಾಡಿಗೆ ಬರುವುದು ಬಾಕಿ ಇದೆ. ಮಳಿಗೆ ಬಾಡಿಗೆದಾರರರು ಸರಿಯಾಗಿ ಬಾಡಿಗೆ ಕಟ್ಟದೆ ಪಾಲಿಕೆಗೆ ನಷ್ಟವಾಗಿದೆ. ೫೦೫ ಮಳಿಗೆಗಳಿದ್ದು, ಅದರಲ್ಲಿ ಇದೀಗ ೩೪೦ ಮಳಿಗೆಗಳ ಕರಾರು ಮುಗಿದಿದೆ. ಈ ಹಿನ್ನೆಲೆಯಲ್ಲಿ ಮರು ಹರಾಜು ಮಾಡುವ ಮೂಲಕ ಹೊಸಬರಿಗೆ ಅವಕಾಶ ನೀಡೋಣ ಎಂದರು.
ಸಭೆಯಲ್ಲಿ ಶಾಸಕ ರವೀಂದ್ರನಾಥ್, ಉಪ ಮೇಯರ್ ಸೌಮ್ಯ ನರೇಂದ್ರ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಮ್ಮ ಗೋಪಿನಾಯ್ಕ್, ಲೆಕ್ಕಪರಿಶೋಧನಾ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಮ್ಮ ಗಿರಿರಾಜ್, ಮಹಾನಗÀರಪಾಲಿಕೆಯ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.