ಪೌರ ಕಾರ್ಮಿಕರಿಗೆ ಇವಿಎಂ ಬಳಕೆ ಜಾಗೃತಿ

ಬೆಂಗಳೂರು, ಮಾ.೧೨-ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷತೆ ಮೂಲಕ ಬಿಬಿಎಂಪಿ ಪೌರ ಕಾರ್ಮಿಕರಿಗೆ ಜಾಗೃತಿ ಮೂಡಿಸಲಾಯಿತು.

ನಗರದಲ್ಲಿಂದು ಮಡಿವಾಳ ವ್ಯಾಪ್ತಿಯ ತಾವರಕೆರೆನಲ್ಲಿ ವಿದ್ಯುನ್ಮಾನ ಮತಯಂತ್ರ ತರಬೇತಿ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮತ ಚಲಾಯಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಪ್ರತಿಕ್ರಿಯಿಸಿದ ಬಿಬಿಎಂಪಿ ಸಿಬ್ಬಂದಿ, ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಹಾಗೂ ಮತದಾನ ಖಾತ್ರಿ ಕುರಿತಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿವಿ ಪ್ಯಾಟ್ ಬಳಕೆ ಬಗ್ಗೆ ಪ್ರಾತ್ಯಕ್ಷತೆ ಮೂಲಕ ಮತದಾರರಲ್ಲಿ ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸದೆ ಇದ್ದಲ್ಲಿ ಹತ್ತಿರದ ಮತಗಟ್ಟೆ ಕೇಂದ್ರಕ್ಕೆ ತೆರಳಿ ಮೊದಲು ಹೆಸರು ಸೇರಿಸಬೇಕು ಎಂದು ಹೇಳಿದರು.