ಪೌಷ್ಟಿಕ ಆಹಾರ ಸೇವಿಸಿ ಕಾಯಿಲೆಗಳಿಂದ ದೂರ ಇರಿ

ಪಿರಿಯಾಪಟ್ಟಣ:ಮಾ.23- ಪ್ರತಿಯೊಬ್ಬರು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಿ ಕಾಯಿಲೆಗಳಿಂದ ದೂರ ಇರುವಂತೆ ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ ತಿಳಿಸಿದರು.
ಪಟ್ಟಣದ ತಾಲ್ಲೂಕು ಆಡಳಿತ ಕಚೇರಿ ಬಳಿ ಸಿಡಿಪಿಒ ಇಲಾಖೆ ವತಿಯಿಂದ ನಡೆದ ಪೆÇಷಣ್ ಪಕ್ವಾಡ್ ಮತ್ತು ಪೆÇೀಷಣ್ ಮೇಳ ಉದ್ಘಾಟಿಸಿ ಅವರು ಮಾತನಾಡಿದರು, ತಾಲ್ಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಸಿಡಿಪಿಒ ಇಲಾಖೆ ವತಿಯಿಂದ ಪೆÇಷಣ್ ಪಕ್ವಾಡ್ ಕಾರ್ಯಕ್ರಮ ಆಯೋಜಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ, ಗರ್ಭಿಣಿ ಮಹಿಳೆಯರು ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮಾಡುವುದರಿಂದ ಮಕ್ಕಳ ಆರೋಗ್ಯ ಸಹ ಚೆನ್ನಾಗಿ ಕಾಪಾಡಿಕೊಳ್ಳಬಹುದು, ಕೊರೋನಾ ಸೋಂಕು ಸಂದರ್ಭ ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ ಮಹಿಳೆಯರು ಹಾಗೂ ಮಕ್ಕಳಿಗೆ ನೀಡುತ್ತಿದ್ದ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಮನೆಮನೆಗೆ ತಲುಪಿಸಿ ಅರಿವು ಮೂಡಿಸಲಾಗಿದೆ, ಸರ್ಕಾರದ ಯೋಜನೆಗಳು ದುರುಪಯೋಗವಾಗದಂತೆ ಸಾರ್ವಜನಿಕರು ನಿಗಾ ವಹಿಸಿ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿ ಮಗು ಹುಟ್ಟಿದಾಗಿನಿಂದ 6 ವರ್ಷದವರೆಗೆ ಪೌಷ್ಠಿಕಾಂಶ ಆಹಾರ ನೀಡಿದರೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.
ಸಿಡಿಪಿಒ ಕುಮಾರ್ ಮಾತನಾಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ನೀಡುವ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡದೆ ಹಾಗೂ ಇತರರಿಗೆ ನೀಡದೆ ಮಕ್ಕಳು ಹಾಗೂ ಗರ್ಭಿಣಿಯರು ಸೇವಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು, ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕಾಂಶ ಆಹಾರ ಪದಾರ್ಥಗಳಲ್ಲಿ ನೀಡುವ ಪುಷ್ಟಿ ಪುಡಿಯು ಮಕ್ಕಳ ಬೆಳವಣಿಗೆಗೆ ಸಹಕಾರಿಯಾಗಲಿದ್ದು ಅದರ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.
ಈ ವೇಳೆ ಪೌಷ್ಠಿಕಾಂಶ ಆಹಾರ ಪದಾರ್ಥಗಳ ಪ್ರದರ್ಶನ ಏರ್ಪಡಿಸಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಈ ಸಂದರ್ಭ ಮೈಮುಲ್ ನಿರ್ದೇಶಕ ಪಿ.ಎಂ ಪ್ರಸನ್ನ, ತಾ.ಪಂ ಕಾರ್ಯನಿರ್ವಾಹಕಾಧಿಕಾರಿ ಡಿ.ಸಿ ಶ್ರುತಿ ಉಪ ತಹಸೀಲ್ದಾರ್ ಶಶಿಧರ್, ಸ್ಥಾಯಿ ಸಮಿತಿ ಅಧ್ಯಕ್ಷ ಎ.ಟಿ ರಂಗಸ್ವಾಮಿ, ಸದಸ್ಯ ಟಿ.ಈರಯ್ಯ, ಇಸಿಒ ಸತೀಶ್, ಮೇಲ್ವಿಚಾರಕಿಯರಾದ ಶ್ವೇತಾ ಮತ್ತು ಸವಿತಾ ಸೇರಿದಂತೆ ತಾಲ್ಲೂಕಿನ ವಿವಿಧೆಡೆಯ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.