ಪ್ಯಾನ್ ಇಂಡಿಯಾ ಚಿತ್ರಪಟ್ಟಿ ಕನ್ನಡದಿಂದ “ಕಬ್ಜ” ಗೆ ಸ್ಥಾನ

ಭಾರತೀಯ ಚಿತ್ರಗಳ  ಪೈಕಿ ಈ ವರ್ಷದ ಬಹುನಿರೀಕ್ಷಿತ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ   ‘ಕಬ್ಜ’ ಕನ್ನಡದಿಂದ ಸ್ಥಾನ ಪಡೆದ ಏಕೈಕ ಚಿತ್ರ ಎನ್ನುವ ಹಿರಿಮೆಗೆ ಪಾತ್ರವಾಗಿದೆ

ಸಿನಿಮಾ, ಟಿವಿ ಕಾರ್ಯಕ್ರಮ ಹಾಗೂ ಸಿನಿಮಾ ತಾರೆಯರ ಅಧಿಕೃತ ಮಾಹಿತಿ ತಾಣ ಇಂಟರ್ನೆಟ್ ಮೂವಿ ಡೇಟಾಬೇಸ್  ಬಹುನಿರೀಕ್ಷಿತ ಚಿತ್ರಗಳ ಪಟ್ಟಿ ಬಿಡುಗಡೆ ಮಾಡಿದೆ.

 20  ಭಾರತೀ ಚಿತ್ರಗಳ ಈ ಪಟ್ಟಿಯಲ್ಲಿ ಕನ್ನಡದಿಂದ ಉಪೇಂದ್ರ ಹಾಗೂ ಸುದೀಪ್ ಅಭಿನಯಿಸಿರುವ ಪ್ಯಾನ್ ಇಂಡಿಯಾ ಚಿತ್ರ ‘ಕಬ್ಜ’ ಇರುವುದು ವಿಶೇಷ.

 ಈ ಪಟ್ಟಿಯಲ್ಲಿ ಕಬ್ಜ ಏಳನೇ ಸ್ಥಾನದಲ್ಲಿದೆ.

ಉಳಿದಂತೆ  ಶಾರುಖ್ ಖಾನ್ ಅಭಿನಯದ ‘ಪಠಾಣ್’, ಅಲ್ಲು ಅರ್ಜುನ್ ಚಿತ್ರ ‘ಪುಷ್ಪ – ದಿ ರೂಲ್’, ಪ್ರಭಾಸ್ , ‘ಸಲಾರ್’ ಮತ್ತು ‘ಆದಿಪುರುಷ್’, ವಿಜಯ್ ನಟನೆಯ ‘ವಾರಿಸು’, ಸಲ್ಮಾನ್ ಖಾನ್ ಅಭಿನಯದ ‘ಟೈಗರ್ 3’, ಕಮಲ್ ಹಾಸನ್ ಅಭಿನಯದ ‘ಇಂಡಿಯನ್ 2’ ಮುಂತಾದ ಚಿತ್ರಗಳಿವೆ. ಹಿಂದಿ, ತೆಲುಗು ಮತ್ತು ತಮಿಳು ಚಿತ್ರಗಳೇ ಹೆಚ್ಚಿರುವ ಈ ಚಿತ್ರಗಳ ಪಟ್ಟಿಯಲ್ಲಿ ಕನ್ನಡದಿಂದ ಏಕೈಕ ಚಿತ್ರವಾಗಿ ‘ಕಬ್ಜ’ ಹೊರಹೊಮ್ಮಿದೆ.

ಆರ್. ಚಂದ್ರು ನಿರ್ಮಿಸಿ, ನಿರ್ದೇಶಿಸಿರುವ ‘ಕಬ್ಜ’ ಚಿತ್ರ ಆರಂಭದಿಂದಲೂ   ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿವೆ. ಚಿತ್ರದ ಟೀಸರ್ ಬಿಡುಗಡೆಯಾದ ಮೇಲೆ ನಿರೀಕ್ಷೆಗಳು ನೂರ್ಮಡಿಯಾಗಿವೆ . ಕರ್ನಾಟಕವಷ್ಟೇ ಅಲ್ಲ, ಬೇರೆ ಭಾಷೆಗಳಲ್ಲೂ ಈ ಚಿತ್ರಕ್ಕಾಗಿ ಬೇಡಿಕೆ ಹೆಚ್ಚಿದ್ದು, ಈಗಾಗಲೇ ಹಿಂದಿ ಅವತರಣಿಕೆಯ ಹಕ್ಕುಗಳನ್ನು ಬಾಲಿವುಡ್ನ ಜನಪ್ರಿಯ ಚಿತ್ರ ನಿರ್ಮಾಣ ಹಾಗೂ ವಿತರಣಾ ಸಂಸ್ಥೆಯಾದ ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಪಡೆದುಕೊಂಡಿದೆ. ಹಿಂದಿಯಷ್ಟೇ ಅಲ್ಲ, ಬೇರೆ ಅವತರಣಿಕೆಗಳ ಹಕ್ಕುಗಳಿಗೂ ಬೇಡಿಕೆ ಹೆಚ್ಚಿದೆ.

ಸದ್ಯದಲ್ಲಿಯೇ ಬಿಡುಗಡೆ

‘ಕಬ್ಜ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ ಎಂದಿದ್ದಾರೆ ನಿರ್ದೇಶಕ ,ನಿರ್ಮಾಪಕ ಆರ್.‌ಚಂದ್ರು.

ಚಿತ್ರದಲ್ಲಿ ಉಪೇಂದ್ರ, ಸುದೀಪ್, ಶ್ರೀಯಾ ಶರಣ್ ಸೇರಿದಂತೆ ಪ್ರತಿಭಾವಂತರ ದೊಡ್ಡ ದಂಡೇ ಇರುವ ಈ ಚಿತ್ರಕ್ಕೆ ‘ರವಿ ಬಸ್ರೂರು ಸಂಗೀತವಿದೆ. ಬಿಡುಗಡೆಯ ಮುನ್ನ ಭಾರತೀಯ ಚಿತ್ರರಂದಲ್ಲಿ ಹೊಸ ಅಲೆ ಸೃಷ್ಟಿಸಿದೆ