ಪ್ರಕರಣ ಮುಚ್ಚಿ ಹಾಕಲು ಹುನ್ನಾರ,ರಾಜ್ಯಪಾಲರಿಗೆ ದೂರು

ರಾಯಚೂರು.ಜ.೦೯- ಹಿಂದಿನ ಕುಲಪತಿ ಬಿ.ವಿ.ಪಾಟೀಲ್ ಅವರು ತಮ್ಮ ಪುತ್ರ ವಿನಯ್ ಪಾಟೀಲ್ ಅವರ ಕೃಷಿ ವಿಶ್ವವಿದ್ಯಾಲಯ ಪ್ರವೇಶಕ್ಕೆ ಸಂಬಂಧಿಸಿ ಆದಾಯ ಪ್ರಮಾಣ ಪತ್ರ ತಿದ್ದುಪಡಿ ಹಾಗೂ ರೈತರ ಕೋಟಾದಡಿ ಪುತ್ರನಿಗೆ ಪ್ರವೇಶ ಅಕ್ರಮಕ್ಕೆ ಸಂಬಂಧಿಸಿನ್ಯಾಯಾಲಯ ಈಗಾಗಲೇ ಸ್ಪಷ್ಟ ತೀರ್ಪು ನೀಡಿದೆ. ಆದಾಯ ಪ್ರಮಾಣ ಪತ್ರತಿದ್ದುಪಡಿಗೆ ಸಂಬಂಧಿಸಿ ವಿಧಿ ವಿಜ್ಞಾನ ತಪಾಸಣೆಯಲ್ಲಿ ಸಾಬೀತುಗೊಂಡಿದೆ.ಈ ಎಲ್ಲಾ ಘಟನೆಗಳ ಮೇರೆಗೆ ಕಾನೂನು ಕ್ರಮ ಕೈಗೊಳ್ಳುವಂತೆ ಕೃಷಿ ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ಆದೇಶಿಸಿತ್ತು.ದುರುದ್ದೇಶ ಪೂರ್ವಕವಾಗಿ ಈ ಪ್ರಕರಣ ಮುಚ್ಚಿ ಹಾಕಲಾಗುತ್ತಿದೆ. ಹೈಕೋರ್ಟ್ ತೀರ್ಪಿನ್ನು ನಿರ್ಲಕ್ಷಿಸಲಾಗುತ್ತಿದೆ.ತಕ್ಷಣವೇ ಈ ಬಗ್ಗೆ ಕಾನೂನು ಕ್ರಮಕ್ಕೆ ಆದೇಶಿಸುವಂತೆ ಸಮಾಜ ಕಾರ್ಯಕರ್ತ ಟಿ. ಮಾರೆಪ್ಪ ಅವರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಕೃಷಿ ವಿಶ್ವವಿದ್ಯಾಲಯದಲ್ಲಿ ರೈತರ ಕೋಟಾದಡಿ ಈ ಹಿಂದಿನ ಕುಲಪತಿ ಬಿ.ವಿ.ಪಾಟೀಲ್ ಅವರ ಪುತ್ರ ವಿನಯ್ ಪಾಟೀಲ್ ಅವರ ಕೃಷಿ ವಿಶ್ವವಿದ್ಯಾಲಯ ಪ್ರವೇಶ ಮತ್ತು ಪದವಿಗೆ ಸಂಬಂಧಿಸಿ ನ್ಯಾಯಾಲಯದ ತೀರ್ಪಿನನ್ವಯ ಮುಂದಿನ ಕ್ರಮ ಕೈಗೊಳ್ಳುವಂತೆ ಕುರಿತು ಕೃಷಿ ವಿಶ್ವವಿದ್ಯಾಲಯದಲ್ಲಿ ೫೧ ನೇ ಸಭೆಯಲ್ಲಿ ಮಂಡಿಸಿದ ವಿಷಯಕ್ಕೆ ಸಂಬಂಧಿಸಿ ಯಾವುದೇ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸದೆ,ಈ ವಿಷಯವನ್ನು ಈ ಹಿಂದೆ ಮುಕ್ತಾಯಗೊಳಿಸಿ,ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಬಹುಮತದ ನಿರ್ಣಯ ಕೈಗೊಂಡ ಘಟನೆ ಬೆಳಕಿಗೆ ಬಂದಿದೆ.
ಈ ಬಗ್ಗೆ ಸಾಮಾನ್ಯ ಸಭೆಯಲ್ಲಿ ಮಂಡಿಸಿ,ಮುಂದಿನ ಕಾನೂನು ಕ್ರಮದ ಬಗ್ಗೆ ಚರ್ಚಿಸಲು ಇತ್ತೀಚಿಗೆ ನಡೆದ ೫೧ನೇಸಭೆಯಲ್ಲಿ ಮಂಡಿಸಲಾಗಿತ್ತು. ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಎಂ.ಹನುಮಂತಪ್ಪ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಸಲಾಗಿತ್ತು. ಹೈಕೋರ್ಟ್ ತೀರ್ಪಿನನ್ವಯ ಮುಂದಿನ ಕಾನೂನು ಕ್ರಮಗಳ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆ ನಡೆಯದೇ, ಕೇವಲ ಪ್ರಕರಣವನ್ನು ಇಲ್ಲಿಗೆ ಮುಕ್ತಾಯಗೊಳಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಲು ಸಭೆಯಲ್ಲಿ ಉಪಸ್ಥಿತರಿದ್ದ ಸದಸ್ಯರು ನಿರ್ಣಯಿಸಿದರು.
ಈ ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆಯುತ್ತಿರುವಾಗಲೇ ಆಡಳಿತ ಮಂಡಳಿ ಸಭೆಯಲ್ಲಿ ಬಿ.ಎ.ಪಾಟೀಲ್ ಅವರ ಪ್ರಕರಣವನ್ನು ಇಲ್ಲಿಗೆ ಮುಕ್ತಾಯಗೊಳಿಸುವ ಬಗ್ಗೆ ನಿರ್ಣಯ ಕೈಗೊಂಡಿದ್ದು,ಈ ಬಗ್ಗೆ ಕಾನೂನು ಕ್ರಮಕ್ಕೆ ಆದೇಶಿಸಬೇಕು ಎಂದು ಒತ್ತಾಯಿಸಿದರು.