ಪ್ರಕರಣ ವಾಪಸ್ ಪಡೆದ ಸರಕಾರ: ಸೂರ್ಯಕಾಂತ್ ಹರ್ಷ

ಬೀದರ್:ಮಾ.31: ಪೂಜಾ ಹಡಪದ ಹತ್ಯೆ ವಿರೋಧಿಸಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರಕಾರ ವಾಪಸ್ ಪಡೆದಿರುವುದು ಸಂತಸದ ಸಂಗತಿ ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ್ ನಾಗಮಾರಪಳ್ಳಿ ತಿಳಿಸಿದ್ದಾರೆ.

ಪೂಜಾ ಹಡಪದ ಪ್ರಕರಣ ವಿರೋಧಿಸಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಆಗ ಕಾರ್ಯಕರ್ತರ ವಿರುದ್ಧ ನಗರದ ಮಾರ್ಕೆಟ್ ಠಾಣೆ ಹಾಗೂ ನಗರ ಪೊಲೀಸ್ ಠಾಣೆಯಲ್ಲಿ ವಿವಿಧ ಕಲಮುಗಳ ಅಡಿ ಪ್ರಕರಣ ದಾಖಲಿಸಲಾಗಿತ್ತು. ಅಮಾಯಕ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ಪ್ರಕರಣ ವಾಪಸ್ ಪಡೆಯುವಂತೆ ರಾಜ್ಯ ಸರಕಾರವನ್ನು ಹಲವು ಬಾರಿ ಕೋರಲಾಗಿತ್ತು. ಮುಖ್ಯಮಂತ್ರಿಯವರು ಈ ಬೇಡಿಕೆಗೆ ಸ್ಪಂದಿಸಿದ್ದಾರೆ ಎಂದು ಸೂರ್ಯಕಾಂತ್ ನಾಗಮಾರಪಳ್ಳಿ ಮಾಹಿತಿ ನೀಡಿದ್ದಾರೆ.

ಪ್ರಕರಣ ವಾಪಸ್ ಪಡೆದ ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.