ಪ್ರಗತಿ ಪರಿಶೀಲನಾ ಸಭೆ ನಾಳೆ

ಕಲಬುರಗಿ,ಮೇ.30-ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮೇ 31 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ.
ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ತಪ್ಪದೆ ಆಗಮಿಸುವಂತೆ ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ಗಿರೀಶ್ ಡಿ. ಬದೋಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.